ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫೆಂಚ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಎಮ್ಯಾನುಯಲ್ ಮ್ಯಾಕ್ರಾನ್ ಅವರಿಂದ ದೂರವಾಣಿ ಕರೆಯನ್ನು ಸ್ವೀಕರಿಸಿದ್ದರು.
ಅಧ್ಯಕ್ಷ ಮ್ಯಾಕ್ರಾನ್ ಅವರು ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ಪ್ರಧಾನಿ ಅವರನ್ನು ಅಭಿನಂದಿಸಿದರು ಮತ್ತು ಸತತ ಮೂರನೇ ಬಾರಿಗೆ ಸರ್ಕಾರ ರಚನೆ ಮಾಡುತ್ತಿರುವುದಕ್ಕೆ ಶುಭ ಕೋರಿದರು.
ಪ್ರಧಾನಮಂತ್ರಿಯವರು ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಭಾರತ ಮತ್ತು ಫ್ರಾನ್ಸ್ ನಡುವಿನ ಬಲವಾದ ಮತ್ತು ವಿಶ್ವಾಸಾರ್ಹ ಕಾರ್ಯತಂತ್ರದ ಸಹಭಾಗಿತ್ವವು ಮುಂಬರುವ ವರ್ಷಗಳಲ್ಲಿ ಹೊಸ ಎತ್ತರಕ್ಕೆ ಏರಲು ಸಜ್ಜಾಗಿದೆ ಎಂದು ಬಲವಾಗಿ ಪ್ರತಿಪಾದಿಸದರು.
'ಹಾರಿಜಾನ್ 2047' ನೀಲನಕ್ಷೆಯಲ್ಲಿ ಮಾಡಲಾದ ಬದ್ಧತೆಗಳನ್ನು ಪೂರೈಸಲು ಒಗ್ಗೂಡಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸಲು ಉಭಯ ನಾಯಕರು ಒಪ್ಪಿಕೊಂಡರು.
ಡಿ-ಡೇಯ ಐತಿಹಾಸಿಕ 80 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಅಧ್ಯಕ್ಷ ಮ್ಯಾಕ್ರನ್ ಅವರಿಗೆ ಶುಭಾಶಯ ಕೋರಿದರು.
ಮುಂಬರುವ ಪ್ಯಾರಿಸ್ ಒಲಿಂಪಿಕ್ ಮತ್ತು ಪ್ಯಾರಾಲಿಂಪಿಕ್ ಕ್ರೀಡಾಕೂಟಗಳಿಗೆ ಪ್ರಧಾನಿ ತಮ್ಮ ಶುಭಾಶಯ ತಿಳಿಸಿದರು.
ಇಬ್ಬರೂ ನಾಯಕರು ನಿಂತರ ಸಂಪರ್ಕದಲ್ಲಿರಲು ಒಪ್ಪಿದರು.
Delighted to receive a phone call from my dear friend, @EmmanuelMacron. Conveyed my commitment to work together to accomplish the ambitious 'Horizon 2047' roadmap. The strong and trusted Strategic Partnership between India & France is slated to scale newer heights in the times to…
— Narendra Modi (@narendramodi) June 6, 2024