ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನೇಪಾಳದ ತನಾಹುನ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತರಿಗೆ ಭಾರತೀಯ ರಾಯಭಾರ ಕಚೇರಿಯು ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಅವರು ಭರವಸೆ ನೀಡಿದರು.
ಶ್ರೀ ಮೋದಿಯವರು Xನಲ್ಲಿ ಪೋಸ್ಟ್ ಮಾಡಿ:
"ನೇಪಾಳದ ತನಾಹುನ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿಯಾಗಿರುವುದು ಬಹಳ ದುಃಖದ ಸಂಗತಿಯಾಗಿದೆ. ದುಃಖಿತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ಭಾರತೀಯ ರಾಯಭಾರ ಕಚೇರಿಯು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯ ಸಹಾಯವನ್ನು ಒದಗಿಸುತ್ತಿದೆ" ಎಂದು ಬರೆದಿದ್ದಾರೆ.
Saddened by the loss of lives due to a road mishap in Tanahun district, Nepal. Condolences to the bereaved families. May the injured recover at the earliest. The Indian Embassy is providing all possible assistance to those affected.
— Narendra Modi (@narendramodi) August 23, 2024