ಚಿತ್ತೋರ್ಗಢದ ಮಾಜಿ ಸಂಸದರಾದ ಶ್ರೀ ಮಹೇಂದ್ರ ಸಿಂಗ್ ಮೇವಾಡ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಎಕ್ಸ್ ಪೋಸ್ಟ್ನಲ್ಲಿ ಅವರು ಹೀಗೆ ಬರೆದಿದ್ದಾರೆ:
“ಸಾಮಾಜಿಕ ಮತ್ತು ರಾಜಕೀಯ ವಲಯಕ್ಕೆ ಅಮೂಲ್ಯ ಕೊಡುಗೆ ನೀಡಿದ ಚಿತ್ತೋರ್ ಗಢದ ಮಾಜಿ ಸಂಸದ ಮತ್ತು ಮೇವಾರ್ ರಾಜಮನೆತನದ ಸದಸ್ಯ ಮಹೇಂದ್ರ ಸಿಂಗ್ ಮೇವಾರ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ರಾಜಾಸ್ತಾನದ ಪರಂಪರೆಯನ್ನು ಸಂರಕ್ಷಿಸಲು ಮತ್ತು ಸುಂದರಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಸಂಪೂರ್ಣ ಸಮರ್ಪಣಾ ಭಾವದಿಂದ ಜನಸೇವಾ ಕೆಲಸಗಳನ್ನು ಮಾಡಿದರು. ಸಮಾಜ ಕಲ್ಯಾಣಕ್ಕಾಗಿ ಅವರ ಕಾರ್ಯ ಸದಾ ಸ್ಫೂರ್ತಿಯ ಸೆಲೆಯಾಗಿರಲಿದೆ. ಈ ದುಃಖದ ಸಮಯದಲ್ಲಿ, ಅವರ ಕುಟುಂಬದವರಿಗೆ ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು. ಓಂ ಶಾಂತಿ!”
सामाजिक और राजनीतिक जीवन में अमूल्य योगदान देने वाले चित्तौड़गढ़ के पूर्व सांसद और मेवाड़ राजघराने के सदस्य महेंद्र सिंह मेवाड़ जी के निधन से अत्यंत दुख हुआ है। वे जीवनपर्यंत राजस्थान की विरासत को सहेजने और संवारने में जुटे रहे। उन्होंने लोगों की सेवा के लिए पूरे समर्पित भाव से…
— Narendra Modi (@narendramodi) November 10, 2024