ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಆರೋಗ್ಯ, ಕೃಷಿ ಮತ್ತು ಸುಸ್ಥಿರ ನಗರಗಳ ಮೇಲೆ ಕೇಂದ್ರೀಕೃತವಾದ ಮೂರು ಕೃತಕ ಬುದ್ಧಿಮತ್ತೆಯ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆಯನ್ನು ಶ್ಲಾಘಿಸಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಅವರು Xನಲ್ಲಿ ಮಾಡಿದ ಪೋಸ್ಟ್ ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿಯವರು:
"ತಂತ್ರಜ್ಞಾನ, ನಾವೀನ್ಯತೆ ಮತ್ತು ಕೃತಕ ಬುದ್ಧಿಮತ್ತೆಯಲ್ಲಿ ಮುನ್ನುಗ್ಗುವ ಭಾರತದ ಪ್ರಯತ್ನದಲ್ಲಿ ಈ ಹೆಜ್ಜೆಯು ಬಹಳ ಪ್ರಮುಖವಾಗಿದೆ. ಈ ಉತ್ಕೃಷ್ಟತಾ ಕೇಂದ್ರಗಳು ನಮ್ಮ ಯುವ ಶಕ್ತಿಗೆ ಪ್ರೋತ್ಸಾಹ ನೀಡಿ ಭಾರತವನ್ನು ಭವಿಷ್ಯದ ಬೆಳವಣಿಗೆಯ ಕೇಂದ್ರವನ್ನಾಗಿ ಮಾಡುತ್ತವೆ ಎಂದು ನನಗೆ ವಿಶ್ವಾಸವಿದೆ" ಎಂದು ಬರೆದಿದ್ದಾರೆ.
A very important stride in India’s effort to become a leader in tech, innovation and AI. I am confident these COEs will benefit our Yuva Shakti and contribute towards making India a hub for futuristic growth. https://t.co/xsoYvmjwyv
— Narendra Modi (@narendramodi) October 15, 2024