ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಿದರು.
ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ಜನತೆಗೆ ಶುಭ ಹಾರೈಸಿದರು. ಒಂದೂವರೆ ವರ್ಷಗಳ ಅಂತರದ ನಂತರ ಕರ್ತಾರ್‌ಪುರ್ ಸಬಿಹ್ ಕಾರಿಡಾರ್ ಅನ್ನು ಯಾತ್ರಿಗಳಿಗೆ ಮತ್ತೆ ಪ್ರವೇಶಮುಕ್ತ ಗೊಳಿಸಿರುವ ಬಗ್ಗೆಯೂ ಅವರು ಸಂತಸ ವ್ಯಕ್ತಪಡಿಸಿದರು.
"ನನ್ನ ಐದು ದಶಕಗಳ ಸಾರ್ವಜನಿಕ ಜೀವನದಲ್ಲಿ ರೈತರ ಸವಾಲುಗಳನ್ನು ನಾನು ಬಹಳ ಹತ್ತಿರದಿಂದ ನೋಡಿದ್ದೇನೆ, ಅದಕ್ಕಾಗಿಯೇ 2014ರಲ್ಲಿ ಪ್ರಧಾನಿಯಾಗಿ ದೇಶಕ್ಕೆ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದಾಗ, ನಾವು ಕೃಷಿ ಅಭಿವೃದ್ಧಿ ಮತ್ತು ರೈತ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆವು," ಎಂದು ಪ್ರಧಾನಿ ಹೇಳಿದರು. ರೈತರ ಪರಿಸ್ಥಿತಿಗಳನ್ನು ಸುಧಾರಿಸಲು ಬೀಜಗಳು, ವಿಮೆ, ಮಾರುಕಟ್ಟೆ ಮತ್ತು ಉಳಿತಾಯದ ನಾಲ್ಕು ಹಂತದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪ್ರಧಾನಿ ವಿವರಿಸಿದರು. ಉತ್ತಮ ಗುಣಮಟ್ಟದ ಬೀಜಗಳೊಂದಿಗೆ, ಸರಕಾರವು ರೈತರಿಗೆ ಬೇವು ಲೇಪಿತ ಯೂರಿಯಾ, ʻಮಣ್ಣಿನ ಆರೋಗ್ಯ ಕಾರ್ಡ್ʼ ಮತ್ತು ಸೂಕ್ಷ್ಮ ನೀರಾವರಿಯಂತಹ ಸೌಲಭ್ಯಗಳನ್ನು ನೀಡುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ರೈತರು ತಮ್ಮ ಕಠಿಣ ಪರಿಶ್ರಮಕ್ಕೆ ಪ್ರತಿಯಾಗಿ ತಮ್ಮ ಉತ್ಪನ್ನಗಳಿಗೆ ಸರಿಯಾದ ಬೆಲೆಯನ್ನು ಪಡೆಯುವಂತಾಗಲು ಅನೇಕ ಉಪಕ್ರಮಗಳನ್ನು ಸರಕಾರ ಕೈಗೊಂಡಿದೆ ಎಂದು ಪ್ರಧಾನಿ ಗಮನ ಸೆಳೆದರು. ದೇಶದಲ್ಲಿ ಗ್ರಾಮೀಣ ಮಾರುಕಟ್ಟೆ ಮೂಲಸೌಕರ್ಯವನ್ನು ಬಲಪಡಿಸಲಾಗಿದೆ. "ನಾವು ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಿರುವುದು ಮಾತ್ರವಲ್ಲದೆ, ದಾಖಲೆ ಸಂಖ್ಯೆಯಲ್ಲಿ ಸರಕಾರಿ ಖರೀದಿ ಕೇಂದ್ರಗಳನ್ನು ತೆರೆದಿದ್ದೇವೆ. ನಮ್ಮ ಸರಕಾರವು ರೈತರು ಬೆಳೆದ ಉತ್ಪನ್ನಗಳ ಖರೀದಿಯಲ್ಲಿ ಕಳೆದ ಹಲವಾರು ದಶಕಗಳ ದಾಖಲೆಗಳನ್ನು ಮುರಿದಿದೆ", ಎಂದು ಅವರು ಹೇಳಿದರು.
ರೈತರ ಸ್ಥಿತಿಯನ್ನು ಸುಧಾರಿಸುವ ಈ ಮಹಾನ್ ಅಭಿಯಾನದ ಭಾಗವಾಗಿ ದೇಶದಲ್ಲಿ ಮೂರು ಕೃಷಿ ಕಾನೂನುಗಳನ್ನು ರೂಪಿಸಲಾಯಿತು ಎಂದು ಪ್ರಧಾನಿ ಹೇಳಿದರು. ದೇಶದ ರೈತರು, ವಿಶೇಷವಾಗಿ ಸಣ್ಣ ರೈತರನ್ನು ಬಲಪಡಿಸಬೇಕು, ಅವರು ತಮ್ಮ ಉತ್ಪನ್ನಗಳಿಗೆ ಸೂಕ್ತ ಬೆಲೆ ಮತ್ತು ಉತ್ಪನ್ನಗಳನ್ನು ಮಾರಾಟ ಮಾಡಲು ಗರಿಷ್ಠ ಆಯ್ಕೆಗಳನ್ನು ಪಡೆಯಬೇಕು ಎಂಬುದು ಇದರ ಹಿಂದಿನ ಉದ್ದೇಶವಾಗಿತ್ತು. ಹಲವಾರು ವರ್ಷಗಳಿಂದ ದೇಶದ ರೈತರು, ದೇಶದ ಕೃಷಿ ತಜ್ಞರು ಮತ್ತು ದೇಶದ ರೈತ ಸಂಘಟನೆಗಳು ನಿರಂತರವಾಗಿ ಈ ಬೇಡಿಕೆಯನ್ನು ಇಡುತ್ತಾ ಬಂದಿದ್ದವು ಎಂದು ಪ್ರಧಾನಿ ಹೇಳಿದರು. ಈ ಹಿಂದೆಯೂ ಅನೇಕ ಸರಕಾರಗಳು ಈ ಬಗ್ಗೆ ಚಿಂತನ-ಮಂಥನ ಮಾಡಿದ್ದವು. ಈ ಬಾರಿಯೂ ಸಂಸತ್ತಿನಲ್ಲಿ ಚರ್ಚೆ ನಡೆಯಿತು, ಚಿಂತನ-ಮಂಥನ ನಡೆಯಿತು ಮತ್ತು ಆ ಬಳಿಕವಷ್ಟೇ ಈ ಕಾನೂನುಗಳನ್ನು ತರಲಾಯಿತು. ದೇಶದ ಮೂಲೆ ಮೂಲೆಗಳಲ್ಲಿ ಅನೇಕ ರೈತ ಸಂಘಟನೆಗಳು ಅದನ್ನು ಸ್ವಾಗತಿಸಿ ಬೆಂಬಲಿಸಿದವು ಎಂದು ಮೋದಿ ಅವರು ನೀಡಿದರು. ಈ ಕ್ರಮವನ್ನು ಬೆಂಬಲಿಸಿದ ಸಂಘಟನೆಗಳು, ರೈತರು ಮತ್ತು ವ್ಯಕ್ತಿಗಳಿಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು.
ಕೃಷಿ ವಲಯದ ಹಿತದೃಷ್ಟಿಯಿಂದ ರೈತರ ಕಲ್ಯಾಣಕ್ಕಾಗಿ, ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ, ಗ್ರಾಮೀಣ-ಬಡವರ ಉಜ್ವಲ ಭವಿಷ್ಯಕ್ಕಾಗಿ, ಸಂಪೂರ್ಣ ಪ್ರಾಮಾಣಿಕತೆ, ಸ್ಪಷ್ಟ ಆತ್ಮಸಾಕ್ಷಿ ಮತ್ತು ರೈತರ ಬಗ್ಗೆ ಸಮರ್ಪಣೆ ಭಾವದೊಂದಿಗೆ ಸರಕಾರ ಈ ಕಾನೂನುಗಳನ್ನು ತಂದಿದೆ ಎಂದು ಪ್ರಧಾನಿ ಹೇಳಿದರು. “ಆದರೆ, ಇಂತಹ ಪವಿತ್ರವಾದ, ಸಂಪೂರ್ಣ ನಿಷ್ಕಲ್ಮಶವಾದ, ರೈತರ ಆಸಕ್ತಿಯ ವಿಷಯವನ್ನು ನಮ್ಮ ಎಲ್ಲಾ ಪ್ರಯತ್ನಗಳ ಹೊರತಾಗಿಯೂ ನಾವು ಕೆಲವು ರೈತರಿಗೆ ಅರ್ಥಮಾಡಿಸಲು ಸಾಧ್ಯವಾಗಲಿಲ್ಲ. ಕೃಷಿ ಅರ್ಥಶಾಸ್ತ್ರಜ್ಞರು, ವಿಜ್ಞಾನಿಗಳು, ಪ್ರಗತಿಪರ ರೈತರು ಕೂಡ ಕೃಷಿ ಕಾನೂನುಗಳ ಮಹತ್ವವನ್ನು ಅವರಿಗೆ ಅರ್ಥಮಾಡಿಸಲು ಗರಿಷ್ಠ ಪ್ರಯತ್ನಗಳನ್ನು ಮಾಡಿದರು", ಎಂದರು. "ನಾವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದ್ದೇವೆ ಎಂದು ಇಡೀ ದೇಶದ ಜನತೆಗೆ ಹೇಳಲು ನಾನು ಬಂದಿದ್ದೇನೆ. ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗುವ ಸಂಸತ್ ಅಧಿವೇಶನದಲ್ಲಿ, ನಾವು ಈ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಸಾಂವಿಧಾನಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ,ʼʼ ಎಂದು ಪ್ರಧಾನಿ ಹೇಳಿದರು.
ಇಂದು ಪವಿತ್ರ ಗುರು ಪುರಬ್ ದಿನವಾದ್ದರಿಂದ ಯಾರನ್ನೂ ದೂಷಿಸುವ ಸಂದರ್ಭವಲ್ಲ ಎಂದು ಪ್ರಧಾನಿ ಹೇಳಿದರು. ಜೊತೆಗೆ ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡಲು ತಮ್ಮನ್ನು ತಾವು ಮರು ಸಮರ್ಪಣೆ ಮಾಡಿಕೊಂಡರು. ಇದೇ ವೇಳೆ, ಕೃಷಿ ಕ್ಷೇತ್ರಕ್ಕೆ ಮಹತ್ವದ ಉಪಕ್ರಮನ್ನು ಅವರು ಪ್ರಕಟಿಸಿದರು. ಶೂನ್ಯ ಬಜೆಟ್ ಆಧಾರಿತ ಕೃಷಿಯನ್ನು ಉತ್ತೇಜಿಸಲು, ದೇಶದಲ್ಲಿ ಬದಲಾಗುತ್ತಿರುವ ಅಗತ್ಯಗಳಿಗೆ ಅನುಗುಣವಾಗಿ ಬೆಳೆ ಮಾದರಿಯನ್ನು ಬದಲಾಯಿಸಲು ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚು ಪರಿಣಾಮಕಾರಿ ಮತ್ತು ಪಾರದರ್ಶಕಗೊಳಿಸಲು ಸಮಿತಿಯನ್ನು ರಚಿಸುವುದಾಗಿ ಅವರು ಘೋಷಿಸಿದರು. ಈ ಸಮಿತಿಯಲ್ಲಿ ಕೇಂದ್ರ ಸರಕಾರ, ರಾಜ್ಯ ಸರಕಾರಗಳು, ರೈತರು, ಕೃಷಿ ವಿಜ್ಞಾನಿಗಳು ಮತ್ತು ಕೃಷಿ ಅರ್ಥಶಾಸ್ತ್ರಜ್ಞರ ಪ್ರತಿನಿಧಿಗಳು ಇರಲಿದ್ದಾರೆ ಎಂದು ಪ್ರಧಾನಿ ಮಾಹಿತಿ ನೀಡಿದರು.
आज गुरु नानक देव जी का पवित्र प्रकाश पर्व है।
— PMO India (@PMOIndia) November 19, 2021
मैं विश्वभर में सभी लोगों को और सभी देशवासियों को हार्दिक बधाई देता हूं: PM @narendramodi
ये भी बहुत सुखद है, कि डेढ़ साल के अंतराल के बाद करतारपुर साबिह कॉरिडोर अब फिर से खुल गया है: PM @narendramodi
— PMO India (@PMOIndia) November 19, 2021
अपने पांच दशक के जीवन में किसानों की चुनौतियों को बहुत करीब से देखा है जब देश हमें 2014 में प्रधानसेवक के रूप में सेवा का अवसर दिया तो हमने कृषि विकास, किसान कल्याण को सर्वोच्च प्राथमिकता दी: PM @narendramodi
— PMO India (@PMOIndia) November 19, 2021
देश के छोटे किसानों की चुनौतियों को दूर करने के लिए, हमने बीज, बीमा, बाजार और बचत, इन सभी पर चौतरफा काम किया।
— PMO India (@PMOIndia) November 19, 2021
सरकार ने अच्छी क्वालिटी के बीज के साथ ही किसानों को नीम कोटेड यूरिया, सॉयल हेल्थ कार्ड, माइक्रो इरिगेशन जैसी सुविधाओं से भी जोड़ा: PM @narendramodi
हमने MSP तो बढ़ाई ही, साथ ही साथ रिकॉर्ड सरकारी खरीद केंद्र भी बनाए।
— PMO India (@PMOIndia) November 19, 2021
हमारी सरकार द्वारा की गई उपज की खरीद ने पिछले कई दशकों के रिकॉर्ड तोड़ दिए हैं: PM @narendramodi
किसानों को उनकी मेहनत के बदले उपज की सही कीमत मिले, इसके लिए भी अनेक कदम उठाए गए।
— PMO India (@PMOIndia) November 19, 2021
देश ने अपने Rural market infrastructure को मजबूत किया: PM @narendramodi
देश के कोने-कोने में कोटि-कोटि किसानों ने, अनेक किसान संगठनों ने, इसका स्वागत किया, समर्थन किया।
— PMO India (@PMOIndia) November 19, 2021
मैं आज उन सभी का बहुत आभारी हूं: PM @narendramodi
देश के कोने-कोने में कोटि-कोटि किसानों ने, अनेक किसान संगठनों ने, इसका स्वागत किया, समर्थन किया।
— PMO India (@PMOIndia) November 19, 2021
मैं आज उन सभी का बहुत आभारी हूं: PM @narendramodi
किसानों की स्थिति को सुधारने के इसी महाअभियान में देश में तीन कृषि कानून लाए गए थे।
— PMO India (@PMOIndia) November 19, 2021
मकसद ये था कि देश के किसानों को, खासकर छोटे किसानों को, और ताकत मिले, उन्हें अपनी उपज की सही कीमत और उपज बेचने के लिए ज्यादा से ज्यादा विकल्प मिले: PM @narendramodi
लेकिन इतनी पवित्र बात, पूर्ण रूप से शुद्ध, किसानों के हित की बात, हम अपने प्रयासों के बावजूद कुछ किसानों को समझा नहीं पाए।
— PMO India (@PMOIndia) November 19, 2021
कृषि अर्थशास्त्रियों ने, वैज्ञानिकों ने, प्रगतिशील किसानों ने भी उन्हें कृषि कानूनों के महत्व को समझाने का भरपूर प्रयास किया: PM @narendramodi
हमारी सरकार, किसानों के कल्याण के लिए, खासकर छोटे किसानों के कल्याण के लिए, देश के कृषि जगत के हित में, देश के हित में, गांव गरीब के उज्जवल भविष्य के लिए, पूरी सत्य निष्ठा से, किसानों के प्रति समर्पण भाव से, नेक नीयत से ये कानून लेकर आई थी: PM @narendramodi
— PMO India (@PMOIndia) November 19, 2021
आज मैं आपको, पूरे देश को, ये बताने आया हूं कि हमने तीनों कृषि कानूनों को वापस लेने का निर्णय लिया है।
— PMO India (@PMOIndia) November 19, 2021
इस महीने के अंत में शुरू होने जा रहे संसद सत्र में, हम इन तीनों कृषि कानूनों को Repeal करने की संवैधानिक प्रक्रिया को पूरा कर देंगे: PM @narendramodi
एमएसपी को और अधिक प्रभावी और पारदर्शी बनाने के लिए,
— PMO India (@PMOIndia) November 19, 2021
ऐसे सभी विषयों पर, भविष्य को ध्यान में रखते हुए, निर्णय लेने के लिए, एक कमेटी का गठन किया जाएगा।
इस कमेटी में केंद्र सरकार, राज्य सरकारों के प्रतिनिधि होंगे, किसान होंगे, कृषि वैज्ञानिक होंगे, कृषि अर्थशास्त्री होंगे: PM (2/2)
आज ही सरकार ने कृषि क्षेत्र से जुड़ा एक और अहम फैसला लिया है।
— PMO India (@PMOIndia) November 19, 2021
जीरो बजट खेती यानि प्राकृतिक खेती को बढ़ावा देने के लिए,
देश की बदलती आवश्यकताओं को ध्यान में रखकर क्रॉप पैटर्न को वैज्ञानिक तरीके से बदलने के लिए - PM @narendramodi (1/2)