Quoteಪ್ರಪ್ರಥಮ ಅಗ್ನಿಪಥ್ ಯೋಜನೆಯ ಪ್ರವರ್ತಕರಾದ ಅಗ್ನಿವೀರರನ್ನು ಪ್ರಧಾನಮಂತ್ರಿ ಅಭಿನಂದಿಸಿದರು
Quoteಈ ಪರಿವರ್ತನಾ ನೀತಿಯು ನಮ್ಮ ಸಶಸ್ತ್ರ ಪಡೆಗಳನ್ನು ಸಶಕ್ತಗೊಳಿಸುವಲ್ಲಿ ಮತ್ತು ಅವರನ್ನು ಭವಿಷ್ಯಕ್ಕೆ ಸಿದ್ಧಗೊಳಿಸುವಲ್ಲಿ ಹೊಸ ಇತಿಹಾಸವನ್ನೇ ಬರೆಯಲಿದೆ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು
Quoteನಮ್ಮ ಸಶಸ್ತ್ರ ಪಡೆಗಳನ್ನು ಆಧುನೀಕರಿಸುವ ಜೊತೆಗೆ ಅವರನ್ನು ಸ್ವಾವಲಂಬಿಯಾಗಿಸುವ ಪ್ರಯತ್ನಗಳು ನಡೆಯುತ್ತಿವೆ: ಪ್ರಧಾನಮಂತ್ರಿ
Quoteಸಂಪರ್ಕರಹಿತ ಯುದ್ಧದ ಹೊಸ ರಂಗಗಳ ಸವಾಲುಗಳನ್ನು ಚರ್ಚಿಸಿದ ಪ್ರಧಾನಮಂತ್ರಿಯವರು, ತಾಂತ್ರಿಕವಾಗಿ ಮುಂದುವರಿದ ಸೈನಿಕರು ನಮ್ಮ ಸಶಸ್ತ್ರ ಪಡೆಗಳಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಿದರು
Quoteಅಗ್ನಿಪಥ್ ಯೋಜನೆಯು ಮಹಿಳೆಯರನ್ನು ಕೂಡ ಸಬಲೀಕರಣಗೊಳಿಸುವ ಬಗ್ಗೆ ಪ್ರಧಾನ ಮಂತ್ರಿ ಚರ್ಚಿಸಿದರು; ಮೂರೂ ಪಡೆಗಳಲ್ಲಿ ಮಹಿಳಾ ಅಗ್ನಿವೀರರನ್ನು ಕಾಣಲು ಬಯಸುವುದಾಗಿ ಹೇಳಿದರು
Quoteವೈವಿಧ್ಯಮಯ ಭಾಷೆಗಳು ಮತ್ತು ಸಂಸ್ಕೃತಿಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳುವ ಅವಕಾಶವನ್ನು ಬಳಸಿಕೊಳ್ಳುವಂತೆ ಪ್ರಧಾನಮಂತ್ರಿ ಅಗ್ನಿವೀರರಿಗೆ ಕರೆ ನೀಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಪ್ರಾಥಮಿಕ ತರಬೇತಿಯನ್ನು ಆರಂಭಿಸಿರುವ ಮೂರು ಸೇವೆಗಳ ಅಗ್ನಿವೀರರ ಮೊದಲ ಬ್ಯಾಚ್ ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ  ಮಾತನಾಡಿದರು. 

ಪ್ರಪ್ರಥಮ ಅಗ್ನಿಪಥ ಯೋಜನೆಯ ಪ್ರವರ್ತಕರಾಗಿದ್ದಕ್ಕಾಗಿ ಪ್ರಧಾನ ಮಂತ್ರಿಗಳು ಅಗ್ನಿವೀರರನ್ನು ಅಭಿನಂದಿಸಿದರು. ಈ ಪರಿವರ್ತನಾ ನೀತಿಯು ನಮ್ಮ ಸಶಸ್ತ್ರ ಪಡೆಗಳನ್ನು ಸಶಕ್ತಗೊಳಿಸುವಲ್ಲಿ ಮತ್ತು ಅವರನ್ನು ಭವಿಷ್ಯದ ಸವಾಲುಗಳನ್ನು ಎದುರಿಸಲು ಸಿದ್ಧಗೊಳಿಸುವಲ್ಲಿ ಹೊಸ ಇತಿಹಾಸವನ್ನೇ ಬರೆಯಲಿದೆ ಎಂದು ಪ್ರಧಾನಮಂತ್ರಿ ಅವರು ಒತ್ತಿ ಹೇಳಿದರು. ಯುವ ಅಗ್ನಿವೀರರು ಸಶಸ್ತ್ರ ಪಡೆಗಳನ್ನು ಹೆಚ್ಚು ತಾರುಣ್ಯಭರಿತ ಮತ್ತು ಟೆಕ್ ಸೆವಿಯನ್ನಾಗಿ ಮಾಡಲಿದ್ದಾರೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.

ಅಗ್ನಿವೀರರ ಸಾಮರ್ಥ್ಯವನ್ನು ಶ್ಲಾಘಿಸಿದ ಅವರು, ಬಾನೆತ್ತರದಲ್ಲಿ ಹಾರುವ ರಾಷ್ಟ್ರಧ್ವಜ ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರತಿಬಿಂಬಿಸುವ ಪ್ರತೀಕದಂತಿದೆ    ಎಂದು ಹೇಳಿದರು. ಈ ಅವಕಾಶದ ಮೂಲಕ ಅವರು ಪಡೆಯುವ ಅನುಭವವು ಅವರ ಜೀವನದಲ್ಲಿ ಹೆಮ್ಮೆಯ ಸ್ರೋತವಾಗಲಿದೆ ಎಂದು ಹೇಳಿದರು.

ನವ ಭಾರತವು ನವ ಚೈತನ್ಯದಿಂದ ತುಂಬಿದೆ ಮತ್ತು ನಮ್ಮ ಸಶಸ್ತ್ರ ಪಡೆಗಳನ್ನು ಆಧುನೀಕರಿಸುವ ಜೊತೆಗೆ ಅವರನ್ನು ಸ್ವಾವಲಂಬಿಯಾಗಿ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪ್ರಧಾನಮಂತ್ರಿ ಹೇಳಿದರು. 21ನೇ ಶತಮಾನದಲ್ಲಿ ಯುದ್ಧ ಮಾಡುವ ರೀತಿ ಬದಲಾಗುತ್ತಿದೆ ಎಂದರು. ಸಂಪರ್ಕರಹಿತ ಯುದ್ಧದ ಹೊಸ ರಂಗಗಳು ಮತ್ತು ಸೈಬರ್ ಯುದ್ಧದ ಸವಾಲುಗಳನ್ನು ಚರ್ಚಿಸಿದ ಅವರು, ನಮ್ಮ ಸಶಸ್ತ್ರ ಪಡೆಗಳಲ್ಲಿ ತಾಂತ್ರಿಕವಾಗಿ ಮುಂದುವರಿದ ಸೈನಿಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು. ವಿಶೇಷವಾಗಿ ಪ್ರಸ್ತುತ ಯುವ ಪೀಳಿಗೆಯು  ಈ ಸಾಮರ್ಥ್ಯವನ್ನು ಹೊಂದಿದೆ ಎಂದು ಅವರು ಹೇಳಿದರು. ಆದ್ದರಿಂದ ಮುಂಬರುವ ದಿನಗಳಲ್ಲಿ ನಮ್ಮ ಸಶಸ್ತ್ರ ಪಡೆಗಳಲ್ಲಿ ಅಗ್ನಿವೀರರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.

ಈ ಯೋಜನೆಯು ಮಹಿಳೆಯರನ್ನು ಮತ್ತಷ್ಟು ಸಬಲೀಕರಣಗೊಳಿಸುವುದು ಕುರಿತು ಪ್ರಧಾನಮಂತ್ರಿ ಮಾತನಾಡಿದರು. ಮಹಿಳಾ ಅಗ್ನಿವೀರರು ನೌಕಾ ಪಡೆಯ  ಹೆಮ್ಮೆಯನ್ನು ಹೆಚ್ಚಿಸುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ ಅವರು, ಮೂರೂ ಪಡೆಗಳಲ್ಲಿ ಮಹಿಳಾ ಅಗ್ನಿವೀರರನ್ನು ಕಾಣಲು ಬಯಸುತ್ತೇನೆ ಎಂದು ಹೇಳಿದರು. ಸಿಯಾಚಿನ್ ‌ನಲ್ಲಿ ಮಹಿಳಾ ಸೈನಿಕರು ಮತ್ತು ಆಧುನಿಕ ಯುದ್ಧ ವಿಮಾನಗಳ ಹಾರಾಟ ಮಾಡುವ ಮಹಿಳೆಯರ ಉದಾಹರಣೆಗಳನ್ನು ಉಲ್ಲೇಖಿಸಿ, ವಿವಿಧ ರಂಗಗಳಲ್ಲಿ ಮಹಿಳೆಯರು ಹೇಗೆ ಸಶಸ್ತ್ರ ಪಡೆಗಳನ್ನು ಮುನ್ನಡೆಸುತ್ತಿದ್ದಾರೆ ಎಂಬುದನ್ನು ಪ್ರಧಾನಮಂತ್ರಿ ಸ್ಮರಿಸಿದರು.

ವಿವಿಧ ಪ್ರದೇಶಗಳಲ್ಲಿ ನೇಮಕಗೊಳ್ಳುವುದರಿಂದ ಅವರಿಗೆ ವೈವಿಧ್ಯಮಯ ಅನುಭವಗಳನ್ನು ಪಡೆಯುವ ಅವಕಾಶ ದೊರೆಯುತ್ತದೆ ಮತ್ತು ಅವರು ವಿವಿಧ ಭಾಷೆಗಳನ್ನು ಕಲಿಯಲು ಪ್ರಯತ್ನಿಸಬೇಕು ಮತ್ತು ವಿಭಿನ್ನ ಸಂಸ್ಕೃತಿಗಳು ಮತ್ತು ಜೀವನ ವಿಧಾನಗಳ ಬಗ್ಗೆಯೂ ಕಲಿಯಬೇಕು ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಸಾಂಘಿಕ ಕೆಲಸ ಮತ್ತು ನಾಯಕತ್ವದ ಕೌಶಲ್ಯವನ್ನು ಗೌರವಿಸುವುದು ಅವರ ವ್ಯಕ್ತಿತ್ವಕ್ಕೆ ಹೊಸ ಆಯಾಮವನ್ನು ನೀಡುತ್ತದೆ ಎಂದರು. ತಮ್ಮ ಆಯ್ಕೆಯ ಕ್ಷೇತ್ರಗಳಲ್ಲಿ ತಮ್ಮ ಕೌಶಲ್ಯಾಭಿವೃದ್ಧಿಗಾಗಿ ಏಕಕಾಲದಲ್ಲಿ ಕೆಲಸ ಮಾಡುವಾಗ ಹೊಸ ವಿಷಯಗಳನ್ನು ಕಲಿಯುವ ಬಗ್ಗೆ ಕುತೂಹಲದಿಂದ ಇರಬೇಕೆಂದು ಅವರು ಅಗ್ನಿವೀರರನ್ನು ಉತ್ತೇಜಿಸಿದರು.

ಯುವಕರು ಮತ್ತು ಅಗ್ನಿವೀರರ ಸಾಮರ್ಥ್ಯವನ್ನು ಶ್ಲಾಘಿಸಿದ ಪ್ರಧಾನಮಂತ್ರಿ ಅವರು 21ನೇ ಶತಮಾನದಲ್ಲಿ ರಾಷ್ಟ್ರಕ್ಕೆ ನಾಯಕತ್ವವನ್ನು ನೀಡಲಿರುವವರಾಗಿದ್ದಾರೆ ಎಂದು ಹೇಳುವ ಮೂಲಕ ತಮ್ಮ ಮಾತು ಮುಗಿಸಿದರು.

  • Suryakant Amaranth Pandey February 01, 2023

    Jay Jay Shri Ram
  • Suryakant Amaranth Pandey January 28, 2023

    Har Har Modi ghar ghar modi
  • Suryakant Amaranth Pandey January 28, 2023

    Jay Jay shree Ram
  • Suryakant Amaranth Pandey January 27, 2023

    हर हर मोदी घर घर मोदी मोदी है तो मुमकिन है
  • Suryakant Amaranth Pandey January 27, 2023

    बेस्ट नेशनल कबड्डी खिलाड़ी गुजरात आनंद राहुल पांडे
  • January 26, 2023

    Hindustan jindabad jay hind
  • kheemanand pandey January 25, 2023

    अग्निपथ योजना📋 बहुप्रतीक्षित कौशल विकास का आधार जो युवाओं अभिभावकों को ही संबल व सहयोग नहीं देगी अपितु राष्ट्रीय समृद्धि में महत्वपूर्ण भूमिका अदा करने में सक्षम होगी उक्त भाव सूक्ष्म रूप में दूरदर्शी भावना से परिलक्षित होता है🙏
  • Sanjay Zala January 24, 2023

    👩‍✈️👩‍🎨 Asking In A Best Wishes Of A Over All In A _ 'WORLDWIDE' Cosponsored On A _ 'National' Girl Child Day. Believed In A _ Save Girl & Child Touch 02 A _ Education & Educated Onwards Of A. 👩‍🎨👩‍✈️
  • Mousumi Paul January 22, 2023

    Jai Hind Ki Senaa 🙏 🇮🇳
  • अनन्त राम मिश्र January 22, 2023

    जय हिंद जय भारत बंदेमातरम् जय हो बिजय हो
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
In Mann Ki Baat, PM Stresses On Obesity, Urges People To Cut Oil Consumption

Media Coverage

In Mann Ki Baat, PM Stresses On Obesity, Urges People To Cut Oil Consumption
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಫೆಬ್ರವರಿ 2025
February 24, 2025

6 Years of PM Kisan Empowering Annadatas for Success

Citizens Appreciate PM Modi’s Effort to Ensure Viksit Bharat Driven by Technology, Innovation and Research