ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸೆಪ್ಟೆಂಬರ್ 10 ರಂದು ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಕೆನಡಾದ ಪ್ರಧಾನಮಂತ್ರಿ ಶ್ರೀ ಜಸ್ಟಿನ್ ಟ್ರುಡೊ ಅವರನ್ನು ಭೇಟಿಯಾದರು.
ಭಾರತದ ಜಿ20 ಅಧ್ಯಕ್ಷತೆಯ ಯಶಸ್ಸಿಗೆ ಶ್ರೀ ಟ್ರುಡೊ ಅವರು ಪ್ರಧಾನ ಮಂತ್ರಿಯವರನ್ನು ಅಭಿನಂದಿಸಿದರು.
ಭಾರತ ಮತ್ತು ಕೆನಡಾ ಸಂಬಂಧಗಳು ಹಂಚಿಕೆಯ ಪ್ರಜಾಸತ್ತಾತ್ಮಕ ಮೌಲ್ಯಗಳು, ಕಾನೂನಿಗೆ ಗೌರವ ಮತ್ತು ಬಲವಾದ ಜನರಿಂದ ಜನರ ಬಾಂಧವ್ಯಗಳಲ್ಲಿ ಆಧಾರವಾಗಿವೆ ಎಂದು ಪ್ರಧಾನಮಂತ್ರಿಯವರು ಒತ್ತಿ ಹೇಳಿದರು. ಕೆನಡಾದಲ್ಲಿ ಉಗ್ರಗಾಮಿಗಳು ಭಾರತ ವಿರೋಧಿ ಚಟುವಟಿಕೆಗಳನ್ನು ಮುಂದುವರೆಸುವ ಬಗ್ಗೆ ಅವರು ನಮ್ಮ ಗಂಭೀರ ಕಳವಳವನ್ನು ವ್ಯಕ್ತಪಡಿಸಿದರು. ಅವರು ಪ್ರತ್ಯೇಕತಾವಾದವನ್ನು ಉತ್ತೇಜಿಸುತ್ತಿದ್ದಾರೆ ಮತ್ತು ಭಾರತೀಯ ರಾಜತಾಂತ್ರಿಕರ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆ, ರಾಜತಾಂತ್ರಿಕ ಆವರಣಗಳನ್ನು ಹಾನಿಗೊಳಿಸುತ್ತಿದ್ದಾರೆ ಮತ್ತು ಕೆನಡಾದಲ್ಲಿರುವ ಭಾರತೀಯ ಸಮುದಾಯ ಮತ್ತು ಅವರ ಪೂಜಾ ಸ್ಥಳಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಸಂಘಟಿತ ಅಪರಾಧ, ಮಾದಕ ದ್ರವ್ಯ ಸಿಂಡಿಕೇಟ್ಗಳು ಮತ್ತು ಮಾನವ ಕಳ್ಳಸಾಗಣೆಯೊಂದಿಗೆ ಅಂತಹ ಶಕ್ತಿಗಳ ನಂಟು ಕೆನಡಾಕ್ಕೂ ಕಳವಳಕಾರಿಯಾದ ವಿಷಯವಾಗಬೇಕು. ಇಂತಹ ಬೆದರಿಕೆಗಳನ್ನು ಎದುರಿಸಲು ಉಭಯ ದೇಶಗಳು ಸಹಕರಿಸುವುದು ಅತ್ಯಗತ್ಯ.
ಭಾರತ ಮತ್ತು ಕೆನಡಾ ಬಾಂಧವ್ಯದ ಪ್ರಗತಿಗೆ ಪರಸ್ಪರ ಗೌರವ ಮತ್ತು ನಂಬಿಕೆಯ ಆಧಾರದ ಮೇಲೆ ಸಂಬಂಧವು ಅತ್ಯಗತ್ಯ ಎಂದು ಪ್ರಧಾನಮಂತ್ರಿಯವರು ಪ್ರಸ್ತಾಪಿಸಿದರು.
Met PM @JustinTrudeau on the sidelines of the G20 Summit. We discussed the full range of India-Canada ties across different sectors. pic.twitter.com/iP9fsILWac
— Narendra Modi (@narendramodi) September 10, 2023