ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರಿಹಾರ ಘೋಷಿಸಿದ್ದಾರೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ(PMNRF)ಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಚಿಕಿತ್ಸೆಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಈ ಕುರಿತು ಟ್ವೀಟ್ ಮೂಲಕ ಪ್ರಕಟಿಸಿರುವ ಪ್ರಧಾನ ಮಂತ್ರಿ ಕಾರ್ಯಾಲಯವು,
ಮಧ್ಯ ಪ್ರದೇಶದ ದಿಂಡೋರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ತಿಳಿಸಿದೆ.
An ex-gratia of Rs. 2 lakh from PMNRF would be given to the next of kin of each deceased in the mishap in Dindori, MP. The injured would be given Rs. 50,000: PM @narendramodi https://t.co/15gyTtPM5X
— PMO India (@PMOIndia) February 29, 2024