ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಚಿತ ವಿದ್ಯುತ್‌ ಗಾಗಿ ಚಾವಣಿ ಸೌರ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದರು - ಇದು ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಾಗಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ.

"ಸುಸ್ಥಿರ ಅಭಿವೃದ್ಧಿ ಮತ್ತು ಜನರ ಯೋಗಕ್ಷೇಮಕ್ಕಾಗಿ, ನಾವು ಪ್ರಧಾನ ಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ ಪ್ರಾರಂಭಿಸುತ್ತಿದ್ದೇವೆ. ಈ ಯೋಜನೆಯು 75,000 ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ, ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್‌ ಒದಗಿಸುವ ಮೂಲಕ 1 ಕೋಟಿ ಕುಟುಂಬಗಳನ್ನು ಬೆಳಗಿಸುವ ಗುರಿಯನ್ನು ಹೊಂದಿದೆ"

"ಜನರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ನೀಡಲಾಗುವ ಸಬ್ಸಿಡಿಗಳಿಂದ, ಭಾರೀ ರಿಯಾಯಿತಿಯ ಬ್ಯಾಂಕ್ ಸಾಲಗಳವರೆಗೆ, ಕೇಂದ್ರ ಸರ್ಕಾರವು ಜನರ ಮೇಲೆ ಯಾವುದೇ  ಹೊರೆಯಾಗದಂತೆ ನೋಡಿಕೊಳ್ಳುತ್ತದೆ. ಎಲ್ಲಾ ಪಾಲುದಾರರನ್ನು ರಾಷ್ಟ್ರೀಯ ಆನ್‌ಲೈನ್ ಪೋರ್ಟಲ್‌ಗೆ ಸಂಯೋಜಿಸಲಾಗುತ್ತದೆ ಮತ್ತು ಅದು ಮತ್ತಷ್ಟು ಅನುಕೂಲವಾಗಲಿದೆ"

"ಈ ಯೋಜನೆಯನ್ನು ತಳಮಟ್ಟದಲ್ಲಿ ಜನಪ್ರಿಯಗೊಳಿಸಲು, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್‌ಗಳು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಚಾವಣಿ ಸೌರ ವ್ಯವಸ್ಥೆಗಳನ್ನು ಉತ್ತೇಜಿಸಲು ಪ್ರೋತ್ಸಾಹಿಸಬೇಕು. ಅದೇ ಸಮಯದಲ್ಲಿ, ಯೋಜನೆಯು ಹೆಚ್ಚಿನ ಆದಾಯ, ಕಡಿಮೆ ವಿದ್ಯುತ್ ಬಿಲ್‌ಗಳು ಮತ್ತು ಜನರಿಗೆ ಉದ್ಯೋಗ ಸೃಷ್ಟಿಗೆ ಕಾರಣವಾಗುತ್ತದೆ"

"ಸೌರಶಕ್ತಿ ಮತ್ತು ಸುಸ್ಥಿರ ಪ್ರಗತಿಯನ್ನು ಹೆಚ್ಚಿಸೋಣ. ಎಲ್ಲಾ ವಸತಿ ಗ್ರಾಹಕರು, ವಿಶೇಷವಾಗಿ ಯುವಕರು, ಪ್ರಧಾನಮಂತ್ರಿ - ಸೂರ್ಯ ಘರ್: ಮುಫ್ಟ್ ಬಿಜ್ಲಿ ಯೋಜನೆಗೆ at- pmsuryaghar.gov.in ಗೆ ಭೇಟಿ ನೀಡಿ ಇನ್ನಷ್ಟು ಅನ್ವೇಷಿಸಿ  ಯೋಜನೆಯಯನ್ನು ಬಲಪಡಿಸಬೇಕು ಎಂದು ಒತ್ತಾಯಿಸುತ್ತೇನೆ" ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
How PMJDY has changed banking in India

Media Coverage

How PMJDY has changed banking in India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 25 ಮಾರ್ಚ್ 2025
March 25, 2025

Citizens Appreciate PM Modi's Vision : Economy, Tech, and Tradition Thrive