ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಮಾರ್ಚ್ 22-23ರಂದು ಭೂತಾನ್‌ಗೆ ಅಧಿಕೃತ ಭೇಟಿಯ ಭಾಗವಾಗಿ ಇಂದು ಪಾರೋಗೆ ಆಗಮಿಸಿದರು. ಈ ಭೇಟಿಯು ಭಾರತ ಮತ್ತು ಭೂತಾನ್ ನಡುವಿನ ನಿಯಮಿತವಾದ ಉನ್ನತ ಮಟ್ಟದ ವಿನಿಮಯ ಸಂಪ್ರದಾಯ ಹಾಗೂ ʻನೆರೆಹೊರೆಯವರಿಗೆ ಮೊದಲ ನೀತಿʼಗೆ ಭಾರತ ಸರ್ಕಾರ ನೀಡಿರುವ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯುತ್ತದೆ.
ಪಾರೋ ವಿಮಾನ ನಿಲ್ದಾಣದಲ್ಲಿ ಭೂತಾನ್ ಪ್ರಧಾನಮಂತ್ರಿಗಳಾದ ಘನತೆವೆತ್ತ ತ್ಸೆರಿಂಗ್ ಟೊಬ್ಗೆ ಅವರು ಭಾರತದ ಪ್ರಧಾನಮಂತ್ರಿಯವರನ್ನು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಔಪಚಾರಿಕ ಸ್ವಾಗತ ನೀಡಿದರು.
ಈ ಭೇಟಿಯ ವೇಳೆ ಪ್ರಧಾನಮಂತ್ರಿಯವರು ಭೂತಾನ್ ದೊರೆ ಘನತೆವೆತ್ತ ಜಿಗ್ಮೆ ಖೇಸರ್ ನಮ್ಗಯೆಲ್ ವಾಂಗ್ ಚುಕ್ ಹಾಗೂ ಭೂತಾನ್‌ನ ನಾಲ್ಕನೇ ದೊರೆ ಘನತೆವೆತ್ತ ಜಿಗ್ಮೆ ಸಿಂಗ್ಯೆ ವಾಂಗ್ ಚುಕ್ ಅವರೊಂದಿಗೆ ಸಭಿಕರನ್ನು ಸ್ವಾಗತಿಸಲಿದ್ದಾರೆ. ಪ್ರಧಾನಮಂತ್ರಿಯವರು ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಅವರೊಂದಿಗೆ ಮಾತುಕತೆಯನ್ನೂ ನಡೆಸಲಿದ್ದಾರೆ.
ಭಾರತ ಸರ್ಕಾರದ ನೆರವಿನೊಂದಿಗೆ ಥಿಂಫುವಿನಲ್ಲಿ ನಿರ್ಮಿಸಲಾದ ಅತ್ಯಾಧುನಿಕ ಆಸ್ಪತ್ರೆಯಾದ ʻಗ್ಯಾಲ್ಸುಯೆನ್ ಜೆಟ್ಸುನ್ ಪೆಮಾ ತಾಯಿ ಮತ್ತು ಮಕ್ಕಳ ಆಸ್ಪತ್ರೆʼಯನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ.