ಭಾರತದಾದ್ಯಂತ ಜನರು ಸಂಕ್ರಾಂತಿ ಮತ್ತು ಪೊಂಗಲ್ ಅನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ: ಪ್ರಧಾನಮಂತ್ರಿ
ಇದು ನಮ್ಮ ಸಂಸ್ಕೃತಿಯ ಕೃಷಿ ಸಂಪ್ರದಾಯಗಳಲ್ಲಿ ಆಳವಾಗಿ ಬೇರೂರಿರುವ ಕೃತಜ್ಞತೆ, ಸಮೃದ್ಧಿ ಮತ್ತು ಪುನರಾರಂಭದ ಸಂಕೇತವಾಗಿದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ತಮ್ಮ ಸಂಪುಟ ಸಹೋದ್ಯೋಗಿಯಾದ ಶ್ರೀ ಜಿ. ಕಿಶನ್ ರೆಡ್ಡಿಯವರ ನಿವಾಸದಲ್ಲಿ ಸಂಕ್ರಾಂತಿ ಮತ್ತು ಪೊಂಗಲ್ ಆಚರಣೆಯಲ್ಲಿ ಭಾಗವಹಿಸಿದ್ದರು. ಭಾರತದಾದ್ಯಂತ ಜನರು ಸಂಕ್ರಾಂತಿ ಮತ್ತು ಪೊಂಗಲ್ ಅನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ. "ಇದು ನಮ್ಮ ಸಂಸ್ಕೃತಿಯ ಕೃಷಿ ಸಂಪ್ರದಾಯಗಳಲ್ಲಿ ಆಳವಾಗಿ ಬೇರೂರಿರುವ ಕೃತಜ್ಞತೆ, ಸಮೃದ್ಧಿ ಮತ್ತು ಪುನರಾರಂಭದ ಆಚರಣೆಯಾಗಿದೆ" ಎಂದು ಪ್ರಧಾನಿ ಶ್ರೀ ಮೋದಿಯವರು ಹೇಳಿದ್ದಾರೆ. 

 

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"ನನ್ನ ಸಚಿವ ಸಹೋದ್ಯೋಗಿಯಾದ ಶ್ರೀ ಜಿ. ಕಿಶನ್ ರೆಡ್ಡಿಯವರ ನಿವಾಸದಲ್ಲಿ ಸಂಕ್ರಾಂತಿ ಮತ್ತು ಪೊಂಗಲ್ ಆಚರಣೆ ಮತ್ತು ಅತ್ಯುತ್ತಮ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾದೆನು.

 

ಭಾರತದಾದ್ಯಂತ ಜನರು ಸಂಕ್ರಾಂತಿ ಮತ್ತು ಪೊಂಗಲ್ ಅನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ. ಇದು ನಮ್ಮ ಸಂಸ್ಕೃತಿಯ ಕೃಷಿ ಸಂಪ್ರದಾಯಗಳಲ್ಲಿ ಆಳವಾಗಿ ಬೇರೂರಿರುವ ಕೃತಜ್ಞತೆ, ಸಮೃದ್ಧಿ ಮತ್ತು ಪುನರಾರಂಭದ ಆಚರಣೆಯಾಗಿದೆ. 

 

ದೇಶದ ಜನತೆಗೆ ಸಂಕ್ರಾಂತಿ ಮತ್ತು ಪೊಂಗಲ್ ಹಬ್ಬದ ಶುಭಾಶಯಗಳು. ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಸಮೃದ್ಧ ಸುಗ್ಗಿಯ ಋತುವನ್ನು ಹಾರೈಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

@kishanreddybjp

 

 

"Here are some more pictures from the Sankranti programme. Also lit the Bhogi fire."