ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ದೇಶಾದ್ಯಂತ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಾವಿರಾರು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಮಟ್ಟದ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಪ್ರಧಾನಮಂತ್ರಿಯವರು ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಮಂತ್ರಿ ಆವಾಸ್, ಉಜ್ವಲ, ಉಚಿತ ಶೌಚಾಲಯದ ಫಲಾನುಭವಿಯಾಗಿರುವ ತ್ರಿಪುರದ ಚಹಾ ತೋಟದ ಕೆಲಸಗಾರ ಶ್ರೀ ಅರ್ಜುನ್ ಸಿಂಗ್, 1.3 ಲಕ್ಷ ರೂಪಾಯಿಗಳ ಧನಸಹಾಯವನ್ನು ಪಡೆದು ಮಣ್ಣಿನ ಮನೆಯಿಂದ ಸುಸಜ್ಜಿತ ಮನೆಗೆ ಮತ್ತು ಸಾಮಾನ್ಯ ಒಲೆಯಿಂದ ಗ್ಯಾಸ್ ಸ್ಟೌವ್ ಗೆ ಬದಲಾದ ನಂತರ ಅವರ ಜೀವನವು ಬದಲಾಗಿದೆ. ತಮ್ಮ ಗ್ರಾಮ ಮತ್ತು ಸಮೀಪದ ಪ್ರದೇಶಗಳಲ್ಲಿ “ಮೋದಿ ಕಿ ಗ್ಯಾರಂಟಿ ಕಿ ಗಾಡಿ” ಬಗ್ಗೆ ಇರುವ ಉತ್ಸಾಹದ ಬಗ್ಗೆ ಅವರು ಪ್ರಧಾನಮಂತ್ರಿಯವರಿಗೆ ತಿಳಿಸಿದರು. ಸರ್ಕಾರದ ಯೋಜನೆಗಳ ಲಾಭವನ್ನು ಫಲಾನುಭವಿಗಳು ಯಾವುದೇ ರೀತಿಯ ತೊಂದರೆಯಿಲ್ಲದೆ ಪಡೆಯುತ್ತಿದ್ದಾರೆ ಎಂದು ಪ್ರಧಾನಮಂತ್ರಿಯವರು ಸಂತಸ ವ್ಯಕ್ತಪಡಿಸಿದರು.