ಸೂರ್ಯವಂಶಿ ಭಗವಾನ್ ಶ್ರೀರಾಮನ ಪವಿತ್ರೀಕರಣದ ಶುಭ ಸಂದರ್ಭದಲ್ಲಿ, ಅಯೋಧ್ಯೆಗೆ ಭೇಟಿ ನೀಡಿ ಹಿಂತಿರುಗಿದ ತಕ್ಷಣ, ಪ್ರಧಾನಮಂತ್ರಿ ಅವರು ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರಶಕ್ತಿ ಅಳವಡಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ”ಗೆ ಚಾಲನೆ ನೀಡುವ ಸಭೆಯ ಅಧ್ಯಕ್ಷತೆ ವಹಿಸಿದರು.
ತಮ್ಮ ವಿದ್ಯುತ್ ಬಿಲ್ಗಳನ್ನು ಕಡಿಮೆ ಮಾಡಲು ಮತ್ತು ಅವರ ವಿದ್ಯುತ್ ಅಗತ್ಯಗಳಿಗಾಗಿ ಅವರನ್ನು ನಿಜವಾದ ಆತ್ಮನಿರ್ಭರ್ ಮಾಡಲು ಸೂರು ಹೊಂದಿರುವ ಪ್ರತಿ ಮನೆಯವರು ಸೂರ್ಯನ ಶಕ್ತಿಯನ್ನು ಬಳಸಿಕೊಳ್ಳಬಹುದು ಎಂದು ಸಭೆಯಲ್ಲಿ ಪ್ರಧಾನಮಂತ್ರಿ ಅವರು ಹೇಳಿದರು.
‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ಯು ಕಡಿಮೆ ಮತ್ತು ಮಧ್ಯಮ-ಆದಾಯದ ವ್ಯಕ್ತಿಗಳಿಗೆ ಸೌರ ಮೇಲ್ಛಾವಣಿ ಸ್ಥಾಪನೆಗಳ ಮೂಲಕ ಉಚಿತ ವಿದ್ಯುತ್ ಅನ್ನು ಒದಗಿಸುವ ಗುರಿಯನ್ನು ಹೊಂದಿದೆ, ಜೊತೆಗೆ ಹೆಚ್ಚುವರಿ ವಿದ್ಯುತ್ ಉತ್ಪಾದನೆಯನ್ನು ಮಾರಾಟ ಮಾಡಿ ಹೆಚ್ಚುವರಿ ಆದಾಯವನ್ನು ನೀಡುತ್ತದೆ.
ಹೆಚ್ಚಿನ ಸಂಖ್ಯೆಯಲ್ಲಿ ಮೇಲ್ಛಾವಣಿ ಸೌರಶಕ್ತಿಯನ್ನು ಅಳವಡಿಸಿಕೊಳ್ಳಲು ವಸತಿ ಹೊಂದಿರುವ ಗ್ರಾಹಕರನ್ನು ಸೌರ ಮೇಲ್ಛಾವಣಿ ಸ್ಥಾಪನೆಗೆ ಸಜ್ಜುಗೊಳಿಸಲು ಬೃಹತ್ ರಾಷ್ಟ್ರೀಯ ಅಭಿಯಾನವನ್ನು ಪ್ರಾರಂಭಿಸಬೇಕು ಎಂದು ಪ್ರಧಾನಮಂತ್ರಿಯವರು ನಿರ್ದೇಶನ ನೀಡಿದರು.