ಅಮೆರಿಕಾದ ಮಾಜಿ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಮೇಲಿನ ದಾಳಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು, "ನನ್ನ ಸ್ನೇಹಿತ, ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿ ವಿಷಯ ಕೇಳಿ ತೀವ್ರ ಕಳವಳಗೊಂಡಿದ್ದೇನೆ.
ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಸ್ಥಾನವಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.
ದಾಳಿ ಸಂದರ್ಭದಲ್ಲಿ ಮೃತಪಟ್ಟವರು, ಗಾಯಗೊಂಡವರು ಮತ್ತು ಅಮೆರಿಕ ಜನರ ಒಳಿತನ್ನು ನಾವು ಯಾವಾಗಲೂ ಆಶಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.
@realDonaldTrump."
Deeply concerned by the attack on my friend, former President Donald Trump. Strongly condemn the incident. Violence has no place in politics and democracies. Wish him speedy recovery.
— Narendra Modi (@narendramodi) July 14, 2024
Our thoughts and prayers are with the family of the deceased, those injured and the American…