ಬ್ಯಾಡ್ಮಿಂಟನ್ ಆಟಗಾರ ಶ್ರೀ ನಂದು ನಾಟೇಕರ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿಯವರು, "ಭಾರತದ ಕ್ರೀಡಾ ಇತಿಹಾಸದಲ್ಲಿ ಶ್ರೀ ನಂದು ನಾಟೇಕರ್ ಅವರಿಗೆ ವಿಶೇಷ ಸ್ಥಾನವಿದೆ. ಅವರು ಅತ್ಯುತ್ತಮ ಬ್ಯಾಡ್ಮಿಂಟನ್ ಆಟಗಾರ ಮತ್ತು ಉತ್ತಮ ಮಾರ್ಗದರ್ಶಕರಾಗಿದ್ದರು. ಅವರ ಯಶಸ್ಸು ಉದಯೋನ್ಮುಖ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿ ಮುಂದುವರಿದಿದೆ. ಅವರ ನಿಧನದಿಂದ ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಆಲೋಚನೆಗಳು ಒತ್ತಾಸೆಯಾಗಿರುತ್ತವೆ. ಓಂ ಶಾಂತಿ." ಎಂದು ಸಂತಾಪ ಸೂಚಿಸಿದ್ದಾರೆ.
Shri Nandu Natekar has a special place in India’s sporting history. He was an outstanding badminton player and a great mentor. His success continues to motivate budding athletes. Saddened by his demise. My thoughts are with his family and friends in this sad hour. Om Shanti.
— Narendra Modi (@narendramodi) July 28, 2021