ಮಾಜಿ ಸಂಸತ್ ಸದಸ್ಯರಾದ ಶ್ರೀ ಪ್ರಭಾತ್ ಝಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ಆಡಳಿತ ಚಾಣಾಕ್ಷತನವನ್ನು ಸ್ಮರಿಸಿರುವ ಪ್ರಧಾನಮಂತ್ರಿಗಳು, ಪತ್ರಿಕೋದ್ಯಮ ವಲಯಕ್ಕೆ ಝಾ ಅವರ ಕೊಡುಗೆಯನ್ನೂ ನೆನಪಿಸಿಕೊಂಡಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಭಾರತೀಯ ಜನತಾ ಪಕ್ಷದ ವರಿಷ್ಠ ನಾಯಕ ಮತ್ತು ಮಾಜಿ ಸಂಸದ ಪ್ರಭಾತ್ ಝಾ ಅವರ ನಿಧನದಿಂದ ಅತೀವ ದುಃಖವಾಗಿದೆ. ನಾನು ಅವರ ಕಾರ್ಯಶೈಲಿಯನ್ನು ಬಹಳ ಹತ್ತಿರದಿಂದ ನೋಡಿದ್ದು ಸಂಘಟನೆಯನ್ನು ಸಶಕ್ತಗೊಳಿಸಲು ಅವರು ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು. ಜನಸೇವೆಯ ಅವರ ಕಾರ್ಯಗಳ ಜೊತೆಗೆ ಅವರು ಪತ್ರಿಕೋದ್ಯಮ ಮತ್ತು ಬರವಣಿಗೆಯ ಕ್ಷೇತ್ರಗಳಿಗೂ ಅಮೂಲ್ಯವಾದ ಕೊಡುಗೆ ನೀಡಿದ್ದರು. ದುಃಖದ ಈ ಸಮಯದಲ್ಲಿ ಅವರ ಕುಟುಂಬದವರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.!”
भाजपा के वरिष्ठ नेता और पूर्व सांसद प्रभात झा जी के निधन से अत्यंत दुख हुआ है। मैंने उनकी कार्यशैली को बहुत करीब से देखा है कि संगठन को सशक्त बनाने में उन्होंने किस प्रकार सक्रिय भूमिका निभाई। जनसेवा के अपने कार्यों के साथ ही उन्होंने पत्रकारिता और लेखन के क्षेत्र में भी अमूल्य…
— Narendra Modi (@narendramodi) July 26, 2024