ಖ್ಯಾತ ವಕೀಲರಾದ ಶ್ರೀ ಫಾಲಿ ನಾರಿಮನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದರು.
ಪ್ರಧಾನ ಮಂತ್ರಿ X ನಲ್ಲಿ ಸಂದೇಶ ನೀಡಿದ್ದಾರೆ.
"ಶ್ರೀ ಫಾಲಿ ನಾರಿಮನ್ ಜಿ ಅವರು ಅತ್ಯಂತ ಮಹೋನ್ನತ ಕಾನೂನು ಪಂಡಿತರಾಗಿದ್ದರು. ಬುದ್ಧಿಜೀವಿಗಳಲ್ಲಿ ಒಬ್ಬರಾಗಿದ್ದರು. ಅವರು ಸಾಮಾನ್ಯ ನಾಗರಿಕರಿಗೆ ನ್ಯಾಯ ದೊರಕಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರ ನಿಧನದಿಂದ ನನಗೆ ನೋವಾಗಿದೆ. ಅವರ ಕುಟುಂಬ, ಬಂಧು ಬಳಗ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ. ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲಿ" ಎಂದು ಪ್ರಧಾನಮಂತ್ರಿ ಸಂತಾಪ ಸೂಚಿಸಿದ್ದಾರೆ.
Shri Fali Nariman Ji was among the most outstanding legal minds and intellectuals. He devoted his life to making justice accessible to common citizens. I am pained by his passing away. My thoughts are with his family and admirers. May his soul rest in peace.
— Narendra Modi (@narendramodi) February 21, 2024