ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ಪರಿಹಾರವನ್ನು ಘೋಷಿಸಿದ್ದಾರೆ.
ಈ ಸಂಬಂಧ ಪ್ರಧಾನ ಮಂತ್ರಿ ಕಚೇರಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ.
ದತಿಯಾದಲ್ಲಿ ನಡೆದ ದುರಂತ ನಿಜಕ್ಕೂ ಹೃದಯ ವಿದ್ರಾವಕ. ಈ ಘಟನೆಯಲ್ಲಿ ಮೃತಪಟ್ಟವರಿಗೆ ನನ್ನ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ಕೈಗೊಂಡಿದೆ ಎಂದು ಪ್ರಧಾನಿ ಶ್ರೀನರೇಂದ್ರ ಮೋದಿ ಟ್ವೀಟ್ ಸಂದೇಶ ನೀಡಿದ್ದಾರೆ.
ದಾತಿಯಾದಲ್ಲಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬ ಸದಸ್ಯರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಮಂತ್ರಿಗಳು ಘೋಷಿಸಿದ್ದಾರೆ.
दतिया में हुआ सड़क हादसा हृदयविदारक है। इस दुर्घटना में जिन्होंने अपनों को खोया है, उनके परिजनों के प्रति मेरी शोक-संवेदनाएं। घायलों के शीघ्र स्वस्थ होने की कामना करता हूं। राज्य सरकार की देखरेख में स्थानीय प्रशासन राहत और बचाव के काम में पूरी तत्परता से जुटा है: PM Modi
— PMO India (@PMOIndia) June 28, 2023
An ex-gratia of Rs. 2 lakh from PMNRF would be given to the next of kin of those who lost their lives in the mishap in Datia. The injured would be given Rs. 50,000: PM @narendramodi
— PMO India (@PMOIndia) June 28, 2023