ರಾಜಸ್ಥಾನದ ಬಾರ್ಮರ್-ಜೋಧಪುರ ಹೆದ್ದಾರಿಯಲ್ಲಿ ಬಸ್-ಟ್ಯಾಂಕರ್ ಡಿಕ್ಕಿಯಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಸಂತ್ರಸ್ತರಿಗೆ ಪರಿಹಾರ ನೀಡಲು ಶ್ರೀ ಮೋದಿ ಅವರು ಅನುಮೋದನೆ ನೀಡಿದ್ದಾರೆ.
ಈ ಬಗ್ಗೆ ಪ್ರಧಾನ ಮಂತ್ರಿಗಳ ಕಾರ್ಯಾಲಯ ಸರಣಿ ಟ್ವೀಟ್ ಮೂಲಕ ಹೀಗೆ ಹೇಳಿದೆ:
"ರಾಜಸ್ಥಾನದ ಬಾರ್ಮರ್-ಜೋಧಪುರ ಹೆದ್ದಾರಿಯಲ್ಲಿ ಸಂಭವಿಸಿದ ಬಸ್-ಟ್ಯಾಂಕರ್ ಡಿಕ್ಕಿಯಲ್ಲಿ ಜನರು ಪ್ರಾಣಹಾನಿ ಅತೀವ ದುಃಖ ತಂದಿದೆ. ಈ ನೋವಿನ ಸಮಯದಲ್ಲಿ, ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು.
ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ: ಪ್ರಧಾನಿ ನರೇಂದ್ರ ಮೋದಿ @narendramodi
ರಾಜಸ್ಥಾನದ ಬಾರ್ಮರ್-ಜೋಧಪುರ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ʻಪಿಎಂಎನ್‌ಆರ್‌ಎಫ್ʼನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಿ ನರೇಂದ್ರ ಮೋದಿ@narendramodi."
An ex-gratia of Rs. 2 lakh each from PMNRF would be given to the next of kin of those who lost their lives due to the accident at the Barmer-Jodhpur Highway in Rajasthan. The injured would be given Rs. 50,000 each: PM @narendramodi
— PMO India (@PMOIndia) November 10, 2021