ಪಶ್ಚಿಮ ಬಂಗಾಳದಲ್ಲಿ ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಪಘಾತ ಸ್ಥಳಕ್ಕೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಧಾವಿಸುತ್ತಿದ್ದು, ಸಂತ್ರಸ್ತರಿಗೆ ಸಹಾಯ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ(PMNRF)ಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು:
“ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲ್ವೆ ಅಪಘಾತದಿಂದ ಮನಸ್ಸಿಗೆ ತುಂಬಾ ನೋವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಬಗ್ಗೆ ವಿವರ ಪಡೆದಿದ್ದೇನೆ. ಸಂತ್ರಸ್ತರ ನೆರವಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಅಪಘಾತದ ಸ್ಥಳಕ್ಕೆ ಹೋಗುತ್ತಿದ್ದಾರೆ.'' ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿಗಳ ಕಾರ್ಯಾಲಯವು ಎಕ್ಸ್ ಪೋಸ್ಟ್ ನಲ್ಲಿ:
“ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲ್ವೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರ ಚಿಕಿತ್ಸೆಗೆ ತಲಾ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ." ಎಂದು ತಿಳಿಸಿದೆ.
The railway accident in West Bengal is saddening. Condolences to those who lost their loved ones. I pray that the injured recover at the earliest. Spoke to officials and took stock of the situation. Rescue operations are underway to assist the affected. The Railways Minister Shri…
— Narendra Modi (@narendramodi) June 17, 2024
PM @narendramodi has announced that an ex-gratia of Rs. 2 lakh from PMNRF would be given to the next of kin of each deceased in the railway mishap in West Bengal. The injured would be given Rs. 50,000. https://t.co/2zsG6XJsGx
— PMO India (@PMOIndia) June 17, 2024