ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತಮಿಳುನಾಡಿನ ತಿರುಪತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಪಿ.ಎಂ.ಎನ್.ಆರ್.ಎಫ್. ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿಯವರು ಘೋಷಿಸಿದರು.
ಪ್ರಧಾನ ಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಈ ಕುರಿತು ಹಂಚಿಕೊಂಡಿದೆ;
"ತಮಿಳುನಾಡಿನ ತಿರುಪತ್ತೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವಹಾನಿಯಾಗಿರುವುದು ದುಃಖ ತಂದಿದೆ. ದುಃಖಿತ ಕುಟುಂಬಗಳಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಪಿಎಂಎನ್ಆರ್ ಎಫ್ ನಿಂದ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ. ನೀಡಲಾಗುತ್ತದೆ: ಪ್ರಧಾನಿ @narendramodi,’’ ಎಂದು ಹೇಳಿದೆ.
Saddened by the loss of lives due to a road mishap in Tirupathur, Tamil Nadu. Condolences to the bereaved families. I pray that the injured recover soon. An ex-gratia of Rs. 2 lakh from PMNRF would be given to next of kin of each deceased. The injured would be given Rs. 50,000:…
— PMO India (@PMOIndia) September 11, 2023