ಅಸ್ಸಾಂನ ಗೋಲಘಾಟ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿ(PMNRF)ಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರ ಚಿಕಿತ್ಸೆಗೆ ಪರಿಹಾರವಾಗಿ ತಲಾ 50,000 ರೂಪಾಯಿ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ,
"ಅಸ್ಸಾಂನ ಗೋಲಘಾಟ್ ನಲ್ಲಿ ರಸ್ತೆ ಅಪಘಾತದಲ್ಲಿ ಮೃತ ಪಟ್ಟವರ ಬಗ್ಗೆ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ದುಃಖತಪ್ತ ಕುಟುಂಬಸ್ಥರಿಗೆ ಸಂತಾಪಗಳು. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಕಷ್ಟದಲ್ಲಿರುವವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿದೆ. ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರ ಚಿಕಿತ್ಸೆಗೆ ಪರಿಹಾರವಾಗಿ ತಲಾ 50,000 ರೂಪಾಯಿ ಸರ್ಕಾರದಿಂದ ನೀಡಲಾಗುವುದು' ಎಂದು ಪ್ರಧಾನ ಮಂತ್ರಿಗಳು ತಿಳಿಸಿರುವುದಾಗಿ ಬರೆಯಲಾಗಿದೆ.
Pained by the loss of lives due to a road mishap in Golaghat, Assam. Condolences to the bereaved families. May the injured recover at the earliest. The local administration is providing all possible assistance to those affected. An ex-gratia of Rs. 2 lakh from PMNRF would be…
— PMO India (@PMOIndia) January 3, 2024