ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮತ್ತು ಪ್ರೀತಿಪಾತ್ರರಿಗೆ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಮಾಧ್ಯಮ @PMOIndia ದಲ್ಲಿ ತಮ್ಮ ಹೇಳಿಕೆ ಹಂಚಿಕೊಂಡಿರುವ ಅವರು, ಈ ಅಪಘಾತದಿಂದ ಬಾಧಿತರಾದ ಕುಟುಂಬಗಳಿಗೆ ತಮ್ಮ ಶೋಕವನ್ನು ವ್ಯಕ್ತಪಡಿಸಿದ್ದು ಅಪಘಾತದಲ್ಲಿ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸಂಭವಿಸಿದ ರಸ್ತೆ ಅಪಘಾತ ಹೃದಯ ವಿದ್ರಾವಕವಾಗಿದೆ. ಈ ದುರ್ಘಟನೆಯಲ್ಲಿ ಅನೇಕ ಕುಟುಂಬಗಳು ತಮ್ಮ ಆತ್ಮೀಯರನ್ನು ಕಳೆದುಕೊಂಡಿವೆ. ಈ ಅತೀವ ದುಃಖವನ್ನು ಭರಿಸುವ ಶಕ್ತಿಯನ್ನು ನೀಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಜೊತೆಗೆ ಎಲ್ಲಾ ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ನೀಡುತ್ತಿದೆ” ಎಂದು ಪ್ರಧಾನಮಂತ್ರಿ @narendramodi ಹೇಳಿದ್ದಾರೆ.
ಶ್ರೀ ನರೇಂದ್ರ ಮೋದಿ ಅವರು ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ/ ವಾರಸುದಾರರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ- ಪಿ ಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ.
उत्तर प्रदेश के हरदोई में हुई सड़क दुर्घटना मन को व्यथित करने वाली है। इसमें कई परिवारों ने अपनों को खो दिया है। ईश्वर से प्रार्थना है कि उन्हें इस अपार दुख को सहने की शक्ति प्रदान करे। इसके साथ ही मैं सभी घायलों के शीघ्र स्वस्थ होने की कामना करता हूं। राज्य सरकार की निगरानी में…
— PMO India (@PMOIndia) November 6, 2024
The Prime Minister has announced an ex-gratia of Rs. 2 lakh from PMNRF for the next of kin of each deceased in the mishap in Hardoi, Uttar Pradesh. The injured would be given Rs. 50,000. https://t.co/QuwUD4frBn
— PMO India (@PMOIndia) November 6, 2024