ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣಕಳೆದುಕೊಂಡವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ವಿಪತ್ತು ನಿಧಿಯಿಂದ ಪರಿಹಾರ ಮೊತ್ತ ನೀಡಲು ಪ್ರಧಾನ ಮಂತ್ರಿಯವರು ಅನುಮೋದಿಸಿದ್ದಾರೆ.
ಪ್ರಧಾನ ಮಂತ್ರಿಯವರ ಕಾರ್ಯಾಲಯದ ಟ್ವೀಟ್ ಹೀಗಿದೆ:
"ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ಅಪಘಾತವು ಅತ್ಯಂತ ನೋವಿನಿಂದ ಕೂಡಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ಅಪಾರ ನಷ್ಟವನ್ನು ಭರಿಸುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ: ಪ್ರಧಾನ ಮಂತ್ರಿ"
ಕೋಟಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ವಿಪತ್ತು ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿಗಳನ್ನು ನೀಡಲಾಗುವುದು. ಗಾಯಾಳುಗಳಿಗೆ ರೂ 50,000 ನೆರವು: ಪ್ರಧಾನ ಮಂತ್ರಿ
राजस्थान के कोटा में हुआ हादसा अत्यंत पीड़ादायक है। इसमें जिन लोगों को अपनी जान गंवानी पड़ी है, उनके परिजनों के प्रति मैं अपनी संवेदना प्रकट करता हूं। ईश्वर उन्हें इस अपार दुख को सहने की शक्ति प्रदान करे: PM @narendramodi
— PMO India (@PMOIndia) February 21, 2022
Rs. 2 lakh each from PMNRF would be given to the next of kin of those who lost their lives in a tragic accident in Kota. The injured would be given Rs. 50,000: PM @narendramodi
— PMO India (@PMOIndia) February 21, 2022