ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಕಾರ್ಖಾನೆ ದುರಂತದಲ್ಲಿ ಜೀವ ಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿಯವರು ಸಂತ್ರಸ್ತರಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರ ಘೋಷಿಸಿದ್ದಾರೆ.
ಪ್ರಧಾನಮಂತ್ರಿಯವರ ಕಾರ್ಯಾಲಯ ಈ ಕುರಿತು ಹೀಗೆ ಟ್ವೀಟ್ ಮಾಡಿದೆ;
"ಹಿಮಾಚಲ ಪ್ರದೇಶದ ಉನಾದಲ್ಲಿರುವ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಅದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪಗಳು. ಇದೇ ವೇಳೆ, ಅವಘಡದಲ್ಲಿ ಗಾಯಗೊಂಡ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ: ಪ್ರಧಾನಿ"
"ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಕಾರ್ಖಾನೆ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತlA 2 ಲಕ್ಷ ರೂ.ಗಳನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಿ"