ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಾರಾಬಂಕಿಯ ಪೂರ್ವಾಂಚಲ್ ಎಕ್ಸಪ್ರೆಸ್ ವೇ ಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ ಮತ್ತು ಸ್ಥಳೀಯ ಆಡಳಿತ ಸಾಧ್ಯವಾದ ಎಲ್ಲ ನೆರವು ನೀಡಲಿದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯದ ಟ್ವೀಟ್ ನಲ್ಲಿ ಹೀಗೆ ಹೇಳಲಾಗಿದೆ.
“ಬಾರಾಬಂಕಿಯ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ನಲ್ಲಿ ನಡೆದ ರಸ್ತೆ ಅಪಘಾತವು ಅತ್ಯಂತ ದುಃಖ ತಂದಿದೆ. ಈ ಸಂದರ್ಭದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಜೊತೆಗೆ ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಾಧ್ಯವಿರುವ ಎಲ್ಲ ನೆರವು ನೀಡುವ ಕಾರ್ಯದಲ್ಲಿ ತೊಡಗಿದೆ’’.
बाराबंकी में पूर्वांचल एक्सप्रेसवे पर हुआ हादसा अत्यंत दुखद है। इसमें जिन लोगों ने अपनों को खोया है, उनके प्रति मैं अपनी शोक-संवेदना व्यक्त करता हूं। इसके साथ ही सभी घायलों की शीघ्र कुशलता की कामना करता हूं। राज्य सरकार की देखरेख में स्थानीय प्रशासन हरसंभव मदद में जुटा है: PM
— PMO India (@PMOIndia) July 25, 2022