ಖ್ಯಾತ ಜಾನಪದ ಗಾಯಕಿ ಶಾರದಾ ಸಿನ್ಹಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಶಾರದಾ ಸಿನ್ಹಾ ಅವರ ಮೈಥಿಲಿ ಮತ್ತು ಭೋಜ್‌ಪುರಿ ಜಾನಪದ ಗೀತೆಗಳು ಕಳೆದ ಹಲವಾರು ದಶಕಗಳಿಂದ ಬಹಳ ಜನಪ್ರಿಯವಾಗಿವೆ. ನಂಬಿಕೆಯ ಮಹಾನ್ ಹಬ್ಬವಾದ ಛತ್‌ಗೆ ಸಂಬಂಧಿಸಿದ ಅವರ ಸುಮಧುರ ಹಾಡುಗಳು ಯಾವಾಗಲೂ ನೆನಪಿನಲ್ಲಿ ಉಳಿಯುತ್ತವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದಿರುವ ಅವರು,
“ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಹಾಡಿರುವ ಮೈಥಿಲಿ ಮತ್ತು ಭೋಜ್‌ಪುರಿ ಜಾನಪದ ಹಾಡುಗಳು ಕಳೆದ ಹಲವಾರು ದಶಕಗಳಿಂದ ಬಹಳ ಜನಪ್ರಿಯವಾಗಿವೆ. ನಂಬಿಕೆಯ ಮಹಾ ಹಬ್ಬವಾದ ಛತ್‌ಗೆ ಸಂಬಂಧಿಸಿದಂತೆ ಅವರು ಹಾಡಿರುವ ಮಧುರ ಗೀತೆಗಳ ಪ್ರತಿಧ್ವನಿಯು ಶಾಶ್ವತವಾಗಿ ಉಳಿಯುತ್ತದೆ. ಅವರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ಓಂ ಶಾಂತಿ!” ಎಂದು ತಿಳಿಸಿದ್ದಾರೆ.
सुप्रसिद्ध लोक गायिका शारदा सिन्हा जी के निधन से अत्यंत दुख हुआ है। उनके गाए मैथिली और भोजपुरी के लोकगीत पिछले कई दशकों से बेहद लोकप्रिय रहे हैं। आस्था के महापर्व छठ से जुड़े उनके सुमधुर गीतों की गूंज भी सदैव बनी रहेगी। उनका जाना संगीत जगत के लिए एक अपूरणीय क्षति है। शोक की इस… pic.twitter.com/sOaLvUOnrW
— Narendra Modi (@narendramodi) November 5, 2024