ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಶ್ರೀ ಪ್ರಕಾಶ್ ಸಿಂಗ್ ಬಾದಲ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಥ್ರೆಡ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:
"ಶ್ರೀ ಪ್ರಕಾಶ್ ಸಿಂಗ್ ಬಾದಲ್ ಜಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರು ಭಾರತೀಯ ರಾಜಕೀಯದ ಬೃಹತ್ ವ್ಯಕ್ತಿಯಾಗಿದ್ದವರು. ಅವರು ನಮ್ಮ ರಾಷ್ಟ್ರಕ್ಕೆ ಹೆಚ್ಚಿನ ಕೊಡುಗೆ ನೀಡಿದ ಗಮನಾರ್ಹ ರಾಜನೀತಿಜ್ಞರಾಗಿದ್ದರು. ಅವರು ಪಂಜಾಬ್ ನ ಪ್ರಗತಿಗಾಗಿ ದಣಿವರಿಯದೆ ಕೆಲಸ ಮಾಡಿ, ನಿರ್ಣಾಯಕ ಸಮಯದಲ್ಲಿ ರಾಜ್ಯವನ್ನು ಮುನ್ನಡೆಸಿದರು.
ಶ್ರೀ ಪ್ರಕಾಶ್ ಸಿಂಗ್ ಬಾದಲ್ ಅವರ ನಿಧನವು ನನಗೆ ವೈಯಕ್ತಿಕ ನಷ್ಟವಾಗಿದೆ. ನಾನು ಹಲವು ದಶಕಗಳಿಂದ ಅವರೊಂದಿಗೆ ನಿಕಟವಾಗಿ ಸಂವಹನ ನಡೆಸಿದ್ದೇನೆ, ಅವರಿಂದ ಬಹಳಷ್ಟು ಕಲಿತಿದ್ದೇನೆ. ನಮ್ಮ ಅಸಂಖ್ಯಾತ ಸಂಭಾಷಣೆಗಳನ್ನು ನಾನು ನೆನಪಿಸಿಕೊಳ್ಳುತ್ತೇನೆ, ಅದರಲ್ಲಿ ಅವರ ಬುದ್ಧಿವಂತಿಕೆ ಯಾವಾಗಲೂ ಸ್ಪಷ್ಟವಾಗಿ ಕಂಡುಬರುತ್ತದೆ. ಅವರ ಕುಟುಂಬಕ್ಕೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪಗಳು" ಎಂದು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ.
Extremely saddened by the passing away of Shri Parkash Singh Badal Ji. He was a colossal figure of Indian politics, and a remarkable statesman who contributed greatly to our nation. He worked tirelessly for the progress of Punjab and anchored the state through critical times. pic.twitter.com/scx2K7KMCq
— Narendra Modi (@narendramodi) April 25, 2023