ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಧ್ಯಪ್ರದೇಶದ ಬೇತುಲ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶ್ರೀ ಮೋದಿ ಅವರು ಸಂತ್ರಸ್ತರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಪ್ರಧಾನಿ ಕಾರ್ಯಾಲಯ ಹೀಗೆ ಟ್ವೀಟ್ ಮಾಡಿದೆ:
"ಮಧ್ಯಪ್ರದೇಶದ ಬೇತುಲ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರ ಶೀಘ್ರ ಚೇತರಿಕೆಗೆ ಹಾರೈಸುವೆ. ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಿ
Pained by the loss of lives due to an accident in Betul, MP. Condolences to the bereaved families. May the injured recover soon. An ex-gratia of Rs. 2 lakh from PMNRF would be given to the next of kin of each deceased. Rs. 50,000 would be given to the injured: PM @narendramodi
— PMO India (@PMOIndia) November 4, 2022