ಉತ್ತರಪ್ರದೇಶದ ಕನೌಜ್ ನಲ್ಲಿ ಇಂದು ಬಸ್ ಅಪಘಾತದಲ್ಲಿ ಸಂಭವಿಸಿದ ಪ್ರಾಣ ಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ಮೃತರ ವಾರಸುದಾರಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಶ್ರೀ ಮೋದಿ ಅವರು ಪ್ರಕಟಿಸಿದ್ದಾರೆ.
ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
“ಉತ್ತರಪ್ರದೇಶದ ಕನೌಜ್ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಜೀವಹಾನಿಯಿಂದ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ನೆರವು ನೀಡುತ್ತಿದೆ.
ಮೃತರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ
@narendramodi"
Saddened by the loss of lives in the bus accident in Kannauj, Uttar Pradesh. Condolences to those who lost their loved ones. May the injured recover soon. The local administration is assisting those affected.
— PMO India (@PMOIndia) December 6, 2024
An ex-gratia of Rs. 2 lakh from PMNRF would be given to the next of…