ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಕಟ್ಟಡ ಕುಸಿತದಲ್ಲಿ ಸಂಭವಿಸಿದ ಜೀವಹಾನಿಗೆ ಇಂದು ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೃತರ ಹತ್ತಿರದ ಸಂಬಂಧಿಗಳಿಗೆ ಪಿ.ಎಂ.ಎನ್.ಆರ್.ಎಫ್. ನಿಂದ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನು ಘೋಷಿಸಿದರು.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ:
"ಬೆಂಗಳೂರಿನಲ್ಲಿ ಕಟ್ಟಡ ಕುಸಿತದಿಂದ ಉಂಟಾದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ದುಃಖದಲ್ಲಿರುವ ಎಲ್ಲರೊಂದಿಗೆ ನಾನು ಇರಲಿದ್ದೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಪಿ. ಎಂ. ಎನ್. ಆರ್. ಎಫ್. ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಧನ ನೀಡಲಾಗುವುದು. ಪಿಎಂ @narendramodi
Anguished by the loss of lives due to the collapse of a building in Bengaluru. My thoughts are with all those who have lost their loved ones. I pray that the injured recover soon.
— PMO India (@PMOIndia) October 23, 2024
An ex-gratia of Rs. 2 lakhs from PMNRF would be provided to the next of kin of each deceased. The…