ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಜೀವ ಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಘಟನೆಯ ಬಗ್ಗೆ ವಿವರಗಳನ್ನು ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಯವರ ಕಚೇರಿ, "ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ @narendramodi ವಿವರಗಳನ್ನು ಕೋರಿದ್ದಾರೆ. ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಕುಟುಂಬಗಳಿಗೆ ಅವರು ಸಂತಾಪ ಸೂಚಿಸಿದ್ದಾರೆ.” ಎಂದು ತಿಳಿಸಿದೆ.
PM @narendramodi has sought details on the terror attack in Jammu and Kashmir. He has also expressed condolences to the families of those security personnel who have been martyred in the attack.
— PMO India (@PMOIndia) December 13, 2021