ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಾ. ಮೋಹನ ಯಾದವ್ ಅವರನ್ನು ಅಭಿನಂದಿಸಿದರು. ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಜಗದೀಶ ದೇವ್ರಾ ಮತ್ತು ರಾಜೇಂದ್ರ ಶುಕ್ಲಾ ಅವರನ್ನು ಸಹ ಪ್ರಧಾನಮಂತ್ರಿಯವರು ಅಭಿನಂದಿಸಿದರು.
ಪ್ರಧಾನ ಮಂತ್ರಿಯವರು ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ :
“ದೇಶದ ಹೃದಯ ಭಾಗವಾಗಿರುವ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಮೋಹನ ಯಾದವ್ ಮತ್ತು ಉಪಮುಖ್ಯಮಂತ್ರಿಗಳಾದ ಜಗದೀಶ ದೇವ್ರಾ ಜಿ ಮತ್ತು ರಾಜೇಂದ್ರ ಶುಕ್ಲಾ ಜಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು! ನಿಮ್ಮ ನೇತೃತ್ವದಲ್ಲಿ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರವು ದುಪ್ಪಟ್ಟು ಉತ್ಸಾಹದಿಂದ ಕೆಲಸ ಮಾಡುತ್ತದೆ ಮತ್ತು ಅಭಿವೃದ್ಧಿಯ ಹೊಸ ಮಾದರಿಗಳನ್ನು ರಚಿಸುತ್ತದೆ ಎಂದು ನನಗೆ ಖಾತ್ರಿಯಿದೆ.. ಈ ಸಂದರ್ಭದಲ್ಲಿ, ಬಿಜೆಪಿ ಸರ್ಕಾರವು ಜನರ ಜೀವನವನ್ನು ಸುಲಭಗೊಳಿಸಲು ಸರ್ವ ಪ್ರಯತ್ನವನ್ನು ಮಾಡುತ್ತದೆ ಎಂದು ನಾನು ಇಲ್ಲಿ ನನ್ನ ಎಲ್ಲಾ ಕುಟುಂಬದ ಸದಸ್ಯರಿಗೆ ಭರವಸೆ ನೀಡುತ್ತೇನೆ.
देश के हृदयस्थल मध्य प्रदेश के मुख्यमंत्री पद की शपथ लेने पर डॉ. मोहन यादव जी और उप मुख्यमंत्री जगदीश देवड़ा जी एवं राजेंद्र शुक्ला जी को हार्दिक बधाई! मुझे विश्वास है कि आपके नेतृत्व में राज्य में डबल इंजन सरकार दोगुने जोश के साथ काम करेगी और विकास के नए प्रतिमान गढ़ेगी। इस… pic.twitter.com/wCkscH0l2M
— Narendra Modi (@narendramodi) December 13, 2023