ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂಧರ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡವನ್ನು ಅಭಿನಂದಿಸಿದ್ದಾರೆ.
ವಿಕಲಚೇತನರ ಕ್ರಿಕೆಟ್ ಕೌನ್ಸಿಲ್ ಆಫ್ ಇಂಡಿಯಾದ ಟ್ವೀಟ್ ಅನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ ಅವರು,
"ನಮ್ಮ ಕ್ರೀಡಾಪಟುಗಳ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ. ನಾವು ಅಂಧರ ಟಿ-20 ವಿಶ್ವಕಪ್ ಗೆದ್ದಿರುವುದಕ್ಕೆ ಸಂತೋಷವಾಗಿದೆ. ನಮ್ಮ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಭವಿಷ್ಯದ ಪ್ರಯತ್ನಗಳಿಗಾಗಿ ಅವರಿಗೆ ಶುಭ ಹಾರೈಕೆಗಳು," ಎಂದು ಟ್ವೀಟ್ ಮಾಡಿದ್ದಾರೆ.
India is proud of our athletes. Delighted that we have won the T-20 World Cup for the Blind. Congratulations to our team and best wishes to them for their future endeavours. https://t.co/W3eQMo3LRn
— Narendra Modi (@narendramodi) December 17, 2022