ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಾಹ್ಯಾಕಾಶದಲ್ಲಿ ಮತ್ತೊಂದು ತಾಂತ್ರಿಕ ಮೈಲಿಗಲ್ಲನ್ನು ಸಾಧಿಸಿದ್ದಕ್ಕಾಗಿ ಇಸ್ರೋವನ್ನು ಅಭಿನಂದಿಸಿದ್ದಾರೆ.
ಚಂದ್ರಯಾನ -3 ರ ಪ್ರೊಪಲ್ಷನ್ ಮಾಡ್ಯೂಲ್ ಯಶಸ್ವಿ ತಿರುವು ತೆಗೆದುಕೊಂಡಿತು. ಮತ್ತೊಂದು ವಿಶಿಷ್ಟ ಪ್ರಯೋಗದಲ್ಲಿ, ಪ್ರೊಪಲ್ಷನ್ ಮಾಡ್ಯೂಲ್ ಅನ್ನು ಚಂದ್ರನ ಕಕ್ಷೆಯಿಂದ ಭೂಮಿಯ ಕಕ್ಷೆಗೆ ತರಲಾಗುತ್ತದೆ.
ಈ ಸಾಧನೆಯ ಬಗ್ಗೆ ಇಸ್ರೋದ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಅವರು, ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ;
"ಅಭಿನಂದನೆಗಳು @isro. 2040 ರ ವೇಳೆಗೆ ಭಾರತೀಯರನ್ನು ಚಂದ್ರನಲ್ಲಿಗೆ ಕಳುಹಿಸುವ ನಮ್ಮ ಗುರಿ ಸೇರಿದಂತೆ ನಮ್ಮ ಭವಿಷ್ಯದ ಬಾಹ್ಯಾಕಾಶ ಪ್ರಯತ್ನಗಳಲ್ಲಿ ಮತ್ತೊಂದು ತಂತ್ರಜ್ಞಾನ ಮೈಲಿಗಲ್ಲು ಸಾಧಿಸಲಾಗಿದೆ,’’ ಎಂದಿದ್ದಾರೆ.
Congratulations @isro. Another technology milestone achieved in our future space endeavours including our goal to send an Indian to Moon by 2040. https://t.co/emUnLsg2EA
— Narendra Modi (@narendramodi) December 6, 2023