ಕೆನಡಾ ಮುಕ್ತ ಬ್ಯಾಡ್ಮಿಂಟನ್ ಟೂರ್ನಿ - 2023ರಲ್ಲಿ ಗೆಲುವು ಸಾಧಿಸಿದ ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ;
"ಕೆನಡಾ ಓಪನ್ ಬ್ಯಾಡ್ಮಿಂಟನ್ ಟೂರ್ನಿ - 2023ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ವಿಜಯ ಸಾಧಿಸಿದ ಪ್ರತಿಭಾವಂತ ಆಟಗಾರ @ಲಕ್ಷ್ಯ_ಸೇನ್ ಅವರಿಗೆ ಅಭಿನಂದನೆಗಳು!
ಅವರ ವಿಜಯವು ಅವರ ದೃಢ ನಿಶ್ಚಯ ಮತ್ತು ತಾಳ್ಮೆಗೆ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರಕ್ಕೆ ಅಪಾರ ಹೆಮ್ಮೆ ತಂದಿದೆ. ಅವರು ಮುಂಬರುವ ಕ್ರೀಡಾಕೂಟಗಳಲ್ಲಿ ಇನ್ನನೂ ಹೆಚ್ಚಿನ ಸಾಧನೆ ಮಾಡಲಿ, ಅವರ ಭವಿಷ್ಯದ ಎಲ್ಲಾ ಪ್ರಯತ್ನಗಳಿಗೆ ನನ್ನ ಶುಭಾಶಯಗಳು” ಎಂದಿದ್ದಾರೆ.
Congratulations to the talented @lakshya_sen on his outstanding victory at the Canada Open 2023!
— Narendra Modi (@narendramodi) July 10, 2023
His triumph is a testament to his tenacity and determination. It also fills our nation with immense pride. My best wishes to him for his upcoming endeavours. pic.twitter.com/DqCDmNSbhk