ನೆದರ್ಲ್ಯಾಂಡ್ ನ ನೂತನ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿಕ್ ಸ್ಕೂಫ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.
ನವೀಕರಿಸಬಹುದಾದ ಇಂಧನ, ಜಲ ನಿರ್ವಹಣೆ, ಕೃಷಿ ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಭಾರತ-ನೆದರ್‌ಲ್ಯಾಂಡ್ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸಲು ಎದುರು ನೋಡುತ್ತಿದ್ದೇನೆ ಎಂದು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು:
"ನೆದರ್‌ಲ್ಯಾಂಡ್‌ನ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಡಿಕ್ ಸ್ಕೂಫ್ ಅವರಿಗೆ ಅಭಿನಂದನೆಗಳು. ನವೀಕರಿಸಬಹುದಾದ ಇಂಧನ, ಜಲ ನಿರ್ವಹಣೆ, ಕೃಷಿ, ಚಲನಶೀಲತೆ, ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತ-ನೆದರ್‌ಲ್ಯಾಂಡ್‌ನ ಪಾಲುದಾರಿಕೆಯನ್ನು ಮುನ್ನಡೆಸಲು ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ" @MinPres ಎಂದು ಹೇಳಿದ್ದಾರೆ.
Congratulations Dick Schoof on assuming office as the Prime Minister of the Netherlands. Look forward to closely working together to advance India-Netherlands partnership including in the areas of renewable energy, water management, agriculture, mobility, new and emerging…
— Narendra Modi (@narendramodi) July 2, 2024