ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 18+ ವಯೋಮಾನದ ಜನರಿಗೆ ಕೋವಿಡ್-19 ಲಸಿಕೆಯ ಮೊದಲ ಡೋಸ್ ಅನ್ನು 100% ಪೂರೈಸಿದ್ದಕ್ಕಾಗಿ ದೇವ್ಭೂಮಿ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಕೋವಿಡ್-19 ವಿರುದ್ಧದ ದೇಶದ ಹೋರಾಟದಲ್ಲಿ ಉತ್ತರಾಖಂಡದ ಈ ಸಾಧನೆ ಬಹಳ ಮಹತ್ತರವಾದುದು ಎಂದು ಪ್ರಧಾನಿ ಶ್ಲಾಘಿಸಿದ್ದಾರೆ.
ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಮಿ ಅವರ ಟ್ವೀಟ್ಗೆ ಪ್ರತಿಕ್ರಿಯೆಯಾಗಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:
“ದೇವ್ಭೂಮಿ ಜನತೆಗೆ ಅಭಿನಂದನೆಗಳು. ಕೋವಿಡ್ ವಿರುದ್ಧದ ದೇಶದ ಹೋರಾಟದಲ್ಲಿ ಉತ್ತರಾಖಂಡದ ಈ ಸಾಧನೆ ಬಹಳ ಮಹತ್ತರವಾದುದು. ಜಾಗತಿಕವಾಗಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ನಮ್ಮ ಲಸಿಕೆ ಅಭಿಯಾನವು ಅತ್ಯಂತ ಪರಿಣಾಮಕಾರಿಯಾಗಿರಲಿದೆ ಮತ್ತು ಇದರಲ್ಲಿ ಜನರ ಪಾಲ್ಗೊಳ್ಳುವಿಕೆಯೂ ಅಷ್ಟೇ ಮುಖ್ಯ ಎಂಬ ನಂಬಿಕೆ ನನ್ನದು.”
देवभूमि के लोगों को बहुत-बहुत बधाई। कोविड के खिलाफ देश की लड़ाई में उत्तराखंड की यह उपलब्धि अत्यंत महत्वपूर्ण है। मुझे विश्वास है कि वैश्विक महामारी से लड़ने में हमारा वैक्सीनेशन अभियान सबसे अधिक प्रभावी साबित होने वाला है और इसमें जन-जन की भागीदारी अहम है। https://t.co/FdfkPWr6dC
— Narendra Modi (@narendramodi) October 18, 2021