ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮೊದಲ ಸೌರ ಮಿಷನ್ ಆದಿತ್ಯ -ಎಲ್1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಇಸ್ರೊದ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳನ್ನು ಅಭಿನಂದಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;
" ಚಂದ್ರಯಾನ -3 ಯಶಸ್ಸಿನ ನಂತರ, ಭಾರತವು ತನ್ನ ಬಾಹ್ಯಾಕಾಶ ಪ್ರಯಾಣವನ್ನು ಮುಂದುವರೆಸಿದೆ. ಭಾರತದ ಮೊದಲ ಸೌರ ಮಿಷನ್ ಆದಿತ್ಯ -ಎಲ್ 1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಇಸ್ರೊದ ನಮ್ಮ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳಿಗೆ ಅಭಿನಂದನೆಗಳು. ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸುವ ಸಲುವಾಗಿ ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ,’’ ಎಂದು ಹೇಳಿದ್ದಾರೆ.
After the success of Chandrayaan-3, India continues its space journey.
— Narendra Modi (@narendramodi) September 2, 2023
Congratulations to our scientists and engineers at @isro for the successful launch of India’s first Solar Mission, Aditya -L1.
Our tireless scientific efforts will continue in order to develop better…