ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಡಿಸ್ಕಸ್ ಥ್ರೋ-ಎಫ್ 54/55/56 ರಲ್ಲಿ ಬೆಳ್ಳಿ ಪದಕ ಗೆದ್ದ ಯೋಗೇಶ್ ಕಥುನಿಯಾ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಕಥುನಿಯಾ ಅವರ ಬದ್ಧತೆ ಮತ್ತು ಅತ್ಯುತ್ತಮ ಪ್ರದರ್ಶನವು ನಮ್ಮ ರಾಷ್ಟ್ರಕ್ಕೆ ಹೆಮ್ಮೆಯನ್ನು ತುಂಬಿದೆ ಎಂದು ಟ್ವೀಟ್ ಮೂಲಕ ಪ್ರಧಾನಿ ಹೇಳಿದ್ದಾರೆ.
"ಪುರುಷರ ಡಿಸ್ಕಸ್ ಥ್ರೋ-ಎಫ್54/55/56 ರಲ್ಲಿ ಯೋಗೇಶ್ ಕಥುನಿಯಾ ಅವರು ಬೆಳ್ಳಿ ಪದಕವನ್ನು ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರ ಬದ್ಧತೆ ಮತ್ತು ಅತ್ಯುತ್ತಮ ಪ್ರದರ್ಶನವು ನಮ್ಮ ರಾಷ್ಟ್ರಕ್ಕೆ ಹೆಮ್ಮೆಯನ್ನು ತಂದಿದೆ." ಎಂದು ಬರೆದುಕೊಂಡಿದ್ದಾರೆ.
Many congratulations to @YogeshKathuniya for his outstanding Silver Medal win in Men's Discus Throw-F54/55/56. His commitment and outstanding performance have filled our nation with pride. pic.twitter.com/2v6FhYzKqy
— Narendra Modi (@narendramodi) October 24, 2023