ಹ್ಯಾಂಗ್‌ಝೌ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತೀಯ ಅಥ್ಲೀಟ್‌ಗಳು 100ನೇ ಪದಕವನ್ನು ಗೆದ್ದಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದರು.
ಅವರು ಐತಿಹಾಸಿಕ ಸಾಧನೆಗಾಗಿ ಕ್ರೀಡಾಪಟುಗಳು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿ ಹಾಗೂ ಒಟ್ಟಾರೆ ವ್ಯವಸ್ಥೆಯನ್ನು ಶ್ಲಾಘಿಸಿದರು.
ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ.
"ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ 100 ಪದಕಗಳು! ಅಪ್ರತಿಮ ಸಂತೋಷದ ಕ್ಷಣ. ಈ ಯಶಸ್ಸು ನಮ್ಮ ಕ್ರೀಡಾಪಟುಗಳ ಸಂಪೂರ್ಣ ಪ್ರತಿಭೆ, ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪದ ಫಲವಾಗಿದೆ.
ಈ ಗಮನಾರ್ಹ ಮೈಲಿಗಲ್ಲು ನಮಗೆ ಅಪಾರ ಹೆಮ್ಮೆಯನ್ನು ತುಂಬುತ್ತದೆ. ನಮ್ಮ ಕ್ರೀಡಾಪಟುಗಳು, ತರಬೇತುದಾರರು ಮತ್ತು ಅವರೊಂದಿಗೆ ಕೆಲಸ ಮಾಡುವ ಸಹಾಯಕ ಸಿಬ್ಬಂದಿಗೆ ನಾನು ಮೆಚ್ಚುಗೆ ಮತ್ತು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
ಈ ವಿಜಯಗಳು ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತವೆ. ನಮ್ಮ ಯುವಕರಿಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಈ ಕ್ರೀಡಾಪಟುಗಳು ತೋರಿಸಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ.
100 MEDALS at the Asian Para Games! A moment of unparalleled joy. This success is a result of the sheer talent, hard work, and determination of our athletes.
— Narendra Modi (@narendramodi) October 28, 2023
This remarkable milestone fills our hearts with immense pride. I extend my deepest appreciation and gratitude to our… pic.twitter.com/UYQD0F9veM