ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಆದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ.ಎಂ.ಎನ್.ಆರ್.ಎಫ್.)ಯಿಂದ ಸಂತ್ರಸ್ತರಿಗೆ ಪರಿಹಾರ ಧನವನ್ನು ಶ್ರೀ ಮೋದಿ ಅವರು ಘೋಷಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ: ಅದರಲ್ಲಿ
"ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಬಸ್ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ https://@narendramodi, ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್. ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ.ತಾತ್ಕಾಲಿಕ ಪರಿಹಾರ ನೀಡಲಾಗುವುದು” ಎಂದು ತಿಳಿಸಲಾಗಿದೆ.
Expressing grief on the bus accident in Jammu and Kashmir, PM @narendramodi has announced an ex-gratia of Rs. 2 lakh from PMNRF for the next of kin of each deceased. The injured would be given Rs. 50,000.
— PMO India (@PMOIndia) May 31, 2023