ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಮಾಚಲಪ್ರದೇಶದ ಕುಲುವಿನಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ತೊಂದರೆಗೊಳಗಾಗದ ಕುಟುಂಬಗಳಿಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತ ಸಂಪೂರ್ಣ ಸಜ್ಜಾಗಿ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಹಿಮಾಚಲ ಪ್ರದೇಶದ ಕುಲುವಿನಲ್ಲಿ ನಡೆದ ಬೆಂಕಿ ಅನಾಹುತ ದುಃಖಕರ. ಐತಿಹಾಸಿಕ ಮಲಾನಾ ಗ್ರಾಮದಲ್ಲಿ ಸಂಭವಿಸಿದ ಈ ದುರಂತದ ಸಂತ್ರಸ್ತರ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತ ರಕ್ಷಣಾ ಮತ್ತು ಪರಿಹಾರ ಕಾರ್ಯದಲ್ಲಿ ತೊಡಗಿದೆ.‘’ ಎಂದು ಹೇಳಿದ್ದಾರೆ.
हिमाचल प्रदेश के कुल्लू में हुआ अग्निकांड अत्यंत दुखद है। ऐतिहासिक मलाणा गांव में हुई इस त्रासदी के सभी पीड़ित परिवारों के प्रति मैं अपनी संवेदना व्यक्त करता हूं। राज्य सरकार और स्थानीय प्रशासन राहत और बचाव के काम में पूरी तत्परता से जुटे हैं।
— Narendra Modi (@narendramodi) October 27, 2021