Quoteಪ್ರಶಸ್ತಿ ವಿಜೇತರು ತಮ್ಮ ಬೋಧನಾ ಅನುಭವವನ್ನು ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಂಡರು ಮತ್ತು ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿಸಲು ಅವರು ಅಳವಡಿಸಿಕೊಂಡ ನವೀನ ತಂತ್ರಗಳನ್ನು ಹಂಚಿಕೊಂಡರು.
Quoteವಿಕಸಿತ ಭಾರತಕ್ಕಾಗಿ ಇಂದಿನ ಯುವಕರನ್ನು ಸಿದ್ಧಪಡಿಸುವ ಜವಾಬ್ದಾರಿ ಶಿಕ್ಷಕರ ಕೈಯಲ್ಲಿದೆ: ಪ್ರಧಾನಮಂತ್ರಿ
Quoteಎನ್ಇಪಿಯ ಪರಿಣಾಮದ ಬಗ್ಗೆ ಪ್ರಧಾನಮಂತ್ರಿ ಚರ್ಚಿಸಿದರು ಮತ್ತು ಮಾತೃಭಾಷೆಯಲ್ಲಿ ಶಿಕ್ಷಣವನ್ನು ಪಡೆಯುವ ಮಹತ್ವದ ಬಗ್ಗೆ ಮಾತನಾಡಿದರು.
Quoteವಿದ್ಯಾರ್ಥಿಗಳಿಗೆ ವಿವಿಧ ಭಾಷೆಗಳ ಪರಿಚಯವಾಗಲು ಸಹಾಯ ಮಾಡಲು ಸ್ಥಳೀಯ ಜಾನಪದವನ್ನು ವಿವಿಧ ಭಾಷೆಗಳಲ್ಲಿ ಕಲಿಸುವಂತೆ ಶಿಕ್ಷಕರಿಗೆ ಪ್ರಧಾನಮಂತ್ರಿ ಸಲಹೆ.
Quoteಶಿಕ್ಷಕರು ತಮ್ಮ ಉತ್ತಮ ಅಭ್ಯಾಸಗಳನ್ನು ಪರಸ್ಪರ ಹಂಚಿಕೊಳ್ಳುವಂತೆ ಪ್ರಧಾನಮಂತ್ರಿ ಕರೆ.
Quoteಭಾರತದ ವೈವಿಧ್ಯತೆಯನ್ನು ಅನ್ವೇಷಿಸಲು ಶಿಕ್ಷಕರು ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರವಾಸಗಳಿಗೆ ಕರೆದೊಯ್ಯಬಹುದು: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 7, ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗೆ ಸಂವಾದ ನಡೆಸಿದರು.

 

|

ಪ್ರಶಸ್ತಿ ಪುರಸ್ಕೃತರು ತಮ್ಮ ಬೋಧನಾ ಅನುಭವವನ್ನು ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಂಡರು. ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿಸಲು ತಾವು ಬಳಸುವ ಆಸಕ್ತಿದಾಯಕ ತಂತ್ರಗಳ ಬಗ್ಗೆಯೂ ಅವರು ಮಾತನಾಡಿದರು. ಅವರು ತಮ್ಮ ನಿಯಮಿತ ಬೋಧನಾ ಕೆಲಸದ ಜೊತೆಗೆ ತಾವು ಮಾಡುತ್ತಿರುವ ಸಾಮಾಜಿಕ ಕಾರ್ಯಗಳ ಉದಾಹರಣೆಗಳನ್ನು ಹಂಚಿಕೊಂಡರು. ಅವರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿಯವರು, ಬೋಧನಾ ಕಲೆಗೆ ಅವರ ಸಮರ್ಪಣೆ ಮತ್ತು ಹಲವು ವರ್ಷಗಳಿಂದ ಅವರು ಪ್ರದರ್ಶಿಸಿದ ಗಮನಾರ್ಹ ಉತ್ಸಾಹವನ್ನು ಶ್ಲಾಘಿಸಿದರು, ಇದನ್ನು ಪ್ರಶಸ್ತಿಗಳ ಮೂಲಕ ಗುರುತಿಸಲಾಗಿದೆ ಎಂದರು.

ಪ್ರಧಾನಮಂತ್ರಿಯವರು ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮದ ಬಗ್ಗೆ ಚರ್ಚಿಸಿದರು ಮತ್ತು ಮಾತೃಭಾಷೆಯಲ್ಲಿ ಶಿಕ್ಷಣವನ್ನು ಪಡೆಯುವ ಮಹತ್ವದ ಬಗ್ಗೆ ಮಾತನಾಡಿದರು. ಶಿಕ್ಷಕರು ವಿದ್ಯಾರ್ಥಿಗಳಿಗೆ ಸ್ಥಳೀಯ ಜಾನಪದವನ್ನು ವಿವಿಧ ಭಾಷೆಗಳಲ್ಲಿ ಕಲಿಸಬಹುದು, ಇದರಿಂದ ವಿದ್ಯಾರ್ಥಿಗಳು ಬಹು ಭಾಷೆಗಳನ್ನು ಕಲಿಯಬಹುದು ಮತ್ತು ಭಾರತದ ರೋಮಾಂಚಕ ಸಂಸ್ಕೃತಿಗೆ ತೆರೆದುಕೊಳ್ಳಬಹುದು ಎಂದು ಅವರು ಸಲಹೆ ನೀಡಿದರು.

ಭಾರತದ ವೈವಿಧ್ಯತೆಯನ್ನು ಅನ್ವೇಷಿಸಲು ಶಿಕ್ಷಕರು ತಮ್ಮ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರವಾಸಗಳಿಗೆ ಕರೆದೊಯ್ಯಬಹುದು, ಇದು ಅವರ ಕಲಿಕೆಗೆ ಸಹಾಯ ಮಾಡುತ್ತದೆ ಮತ್ತು  ದೇಶದ ಬಗ್ಗೆ ಸಮಗ್ರ ರೀತಿಯಲ್ಲಿ ತಿಳಿದುಕೊಳ್ಳಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ಹೇಳಿದರು. ಇದು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಮತ್ತು ಸ್ಥಳೀಯ ಆರ್ಥಿಕತೆಗೆ ಉತ್ತೇಜನ ನೀಡುತ್ತದೆ ಎಂದೂ ಅವರು ಅಭಿಪ್ರಾಯಪಟ್ಟರು.

 

|

ಪ್ರಶಸ್ತಿ ವಿಜೇತ ಶಿಕ್ಷಕರು ಸಾಮಾಜಿಕ ಮಾಧ್ಯಮಗಳ ಮೂಲಕ ಪರಸ್ಪರ ಸಂಪರ್ಕ ಸಾಧಿಸಬೇಕು ಮತ್ತು ತಮ್ಮ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಬೇಕು, ಇದರಿಂದ ಪ್ರತಿಯೊಬ್ಬರೂ ಅಂತಹ ಅಭ್ಯಾಸಗಳಿಂದ ಕಲಿಯಬಹುದು, ಹೊಂದಿಕೊಳ್ಳಬಹುದು ಮತ್ತು ಪ್ರಯೋಜನ ಪಡೆಯಬಹುದು ಎಂದು ಪ್ರಧಾನಿ ಸಲಹೆ ನೀಡಿದರು.

ಶಿಕ್ಷಕರು ರಾಷ್ಟ್ರಕ್ಕೆ ಬಹಳ ಮುಖ್ಯವಾದ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಮತ್ತು ಇಂದಿನ ಯುವಕರನ್ನು ವಿಕ್ಷಿತ ಭಾರತಕ್ಕಾಗಿ ಸಿದ್ಧಪಡಿಸುವ ಜವಾಬ್ದಾರಿ ಅವರ ಕೈಯಲ್ಲಿದೆ ಎಂದು ಪ್ರಧಾನಿ ಹೇಳಿದರು.

 

|

ಹಿನ್ನೆಲೆ

ತಮ್ಮ ಬದ್ಧತೆ ಮತ್ತು ಕಠಿಣ ಪರಿಶ್ರಮದ ಮೂಲಕ ಶಿಕ್ಷಣ ಕ್ಷೇತ್ರದ ಗುಣಮಟ್ಟವನ್ನು ಸುಧಾರಿಸಿದ್ದಲ್ಲದೆ ತಮ್ಮ ವಿದ್ಯಾರ್ಥಿಗಳ ಜೀವನವನ್ನು ಶ್ರೀಮಂತಗೊಳಿಸಿದ ದೇಶದ ಕೆಲವು ಅತ್ಯುತ್ತಮ ಶಿಕ್ಷಕರ ಅನನ್ಯ ಕೊಡುಗೆಯನ್ನು ಆಚರಿಸುವುದು ಮತ್ತು ಗೌರವಿಸುವುದು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳ ಉದ್ದೇಶವಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆಯ್ಕೆಯಾದ 50 ಶಿಕ್ಷಕರು, ಉನ್ನತ ಶಿಕ್ಷಣ ಇಲಾಖೆಯಿಂದ 16 ಶಿಕ್ಷಕರು ಮತ್ತು ಕೌಶಲ್ಯ ಅಭಿವೃದ್ಧಿ ಹಾಗು ಉದ್ಯಮಶೀಲತೆ ಸಚಿವಾಲಯದಿಂದ ಆಯ್ಕೆಯಾದ 16 ಶಿಕ್ಷಕರು ಸೇರಿದಂತೆ ದೇಶಾದ್ಯಂತ 82 ಶಿಕ್ಷಕರನ್ನು ಈ ವರ್ಷದ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ.

 

|

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

  • ganesan January 08, 2025

    iam bjp member in Tamil Nadu my vote only bjp my family vote only bjp my India my BJP iam daily my request report my Compliant my story my feedback my posts my Grievance petition No response No Action my officer iam not happy iam Bjp member in Tamil Nadu my duty Extra HEAVY punishment duty My india prime minister Hon
  • ram Sagar pandey November 07, 2024

    🌹🙏🏻🌹जय श्रीराम🙏💐🌹जय माता दी 🚩🙏🙏🌹🌹🙏🙏🌹🌹🌹🌹🙏🙏🌹🌹🌹🌹🙏🙏🌹🌹🌹🌹🙏🙏🌹🌹🌹🌹🙏🙏🌹🌹
  • ram Sagar pandey November 07, 2024

    🌹🙏🏻🌹जय श्रीराम🙏💐🌹जय माता दी 🚩🙏🙏🌹🌹🙏🙏🌹🌹🌹🌹🙏🙏🌹🌹🌹🌹🙏🙏🌹🌹जय माँ विन्ध्यवासिनी👏🌹💐🌹🌹🙏🙏🌹🌹
  • Chandrabhushan Mishra Sonbhadra November 03, 2024

    jay shree
  • Avdhesh Saraswat October 31, 2024

    HAR BAAR MODI SARKAR
  • Raja Gupta Preetam October 17, 2024

    जय श्री राम
  • Amrendra Kumar October 15, 2024

    नमो नमो
  • Harsh Ajmera October 14, 2024

    Nicr
  • Rampal Baisoya October 12, 2024

    🙏🙏
  • Vivek Kumar Gupta October 10, 2024

    नमो ..🙏🙏🙏🙏🙏
Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Beyond Freebies: Modi’s economic reforms is empowering the middle class and MSMEs

Media Coverage

Beyond Freebies: Modi’s economic reforms is empowering the middle class and MSMEs
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಮಾರ್ಚ್ 2025
March 24, 2025

Viksit Bharat: PM Modi’s Vision in Action