ಭಾರತದ ರಕ್ಷಣಾ ಕ್ಷೇತ್ರವನ್ನು ಸ್ವಾವಲಂಬಿಯನ್ನಾಗಿ ಮಾಡಲು ಕೈಗೊಳ್ಳುತ್ತಿರುವ ನಿರಂತರ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.
ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯ ಉತ್ತೇಜನವು ದೇಶೀಯ ಪ್ರತಿಭೆಗಳ ಮೇಲಿರುವ ನಮ್ಮ ನಂಬಿಕೆಯನ್ನು ಪುನರುಚ್ಚರಿಸುತ್ತದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.
70,500 ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗಳ ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವ ಮೂಲಕ ಮತ್ತು ಪ್ರಸಕ್ತ ಸಾಲಿನಲ್ಲಿ 2.71 ಲಕ್ಷ ಕೋಟಿ ಮೌಲ್ಯದ ಸಂಗ್ರಹಣೆಗೆ ಆದ್ಯತೆ ನೀಡಿ ಭಾರತದ ರಕ್ಷಣಾ ವಲಯ ಸ್ವಾವಲಂಬಿಯಾಗಿಸಲು ನಿರಂತರ ಪ್ರಯತ್ನಗಳನ್ನು ಕೈಗೊಳ್ಳಲಾಗುತ್ತಿದೆ ಎಂಬ ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಅವರ ಟ್ವೀಟ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತಮ್ಮ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂದೇಶ ನೀಡಿದ್ದಾರೆ.
"ರಕ್ಷಣೆಯಲ್ಲಿ ಸ್ವಾವಲಂಬನೆಗೆ ಉತ್ತೇಜನ, ಭಾರತೀಯ ಪ್ರತಿಭೆಗಳಲ್ಲಿ ನಮ್ಮ ನಂಬಿಕೆಯನ್ನು ಸ್ಪಷ್ಟಪಡಿಸುತ್ತದೆ" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.
A boost to self-reliance in defence, also reaffirming our faith in Indian talent. https://t.co/igjPfcjk3P
— Narendra Modi (@narendramodi) March 17, 2023