ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ರೈಲ್ವೆ, ಚಿನಾಬ್ ನದಿಗೆ ಅಡ್ಡಲಾಗಿ ವಿಶ್ವದ ಅತಿ ಎತ್ತರದ ಕಮಾನು ಆಕಾರದ ಸೇತುವೆ ನಿರ್ಮಾಣ ಪೂರ್ಣಗೊಳಿಸಿರುವುದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ‘ನಮ್ಮ ಭಾರತೀಯರ ಸಾಮರ್ಥ್ಯ ಮತ್ತು ಆತ್ಮವಿಶ್ವಾಸ ಜಗತ್ತಿಗೆ ಒಂದು ಅತ್ಯುತ್ತಮ ಉದಾಹರಣೆಯನ್ನು ನೀಡಿದೆ. ಈ ವೇಗದ ನಿರ್ಮಾಣ ಕೇವಲ ಆಧುನಿಕ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಲಯದಲ್ಲಿ ಭಾರತ ಎಷ್ಟು ವೇಗದ ಪ್ರಗತಿ ಸಾಧಿಸುತ್ತಿದೆ ಎಂಬುದಕ್ಕೆ ಮಾತ್ರ ಸಾಕ್ಷಿಯಲ್ಲ, ‘ಸಂಕಲ್ಪದಿಂದ ಸಿದ್ಧಿ’ ಮಂತ್ರದೊಂದಿಗೆ ಬದಲಾಗುತ್ತಿರುವ ದುಡಿಯುವ ಸಂಸ್ಕೃತಿಗೆ ಒಂದು ಉದಾಹರಣೆಯಾಗಿದೆ’ ಎಂದು ಹೇಳಿದ್ದಾರೆ.
देश के जन-जन का सामर्थ्य और विश्वास आज दुनिया के सामने एक मिसाल पेश कर रहा है। यह निर्माण कार्य न केवल अत्याधुनिक इंजीनियरिंग और टेक्नोलॉजी के क्षेत्र में भारत की बढ़ती ताकत को प्रदर्शित करता है, बल्कि संकल्प से सिद्धि की देश की बदली हुई कार्य संस्कृति का भी उदाहरण है। https://t.co/Hup2RByHYM
— Narendra Modi (@narendramodi) April 5, 2021