ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗುಜರಾತ್ ನ ಜಿಲ್ಲಾ ಪಂಚಾಯತ್ ಸದಸ್ಯರನ್ನು ಭೇಟಿ ಮಾಡಿ, ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ವಿಷಯಗಳು ಹಾಗೂ ಸಾಮಾಜಿಕ ಪ್ರಗತಿಗೆ ಜನಶಕ್ತಿ ಸದ್ಬಳಕೆ ಕುರಿತು ಸುದೀರ್ಘವಾಗಿ ಚರ್ಚಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ;
“ಗುಜರಾತ್ ನ ಜಿಲ್ಲಾ ಪಂಚಾಯತ್ ಸದಸ್ಯರ ಜತೆ ನಿನ್ನೆ ಉತ್ತಮ ಸಭೆ ನಡೆಯಿತು. ನಾವು ಗ್ರಾಮೀಣಾಭಿವೃದ್ಧಿ ಮತ್ತು ಸಮಾಜದ ಪ್ರಗತಿಗೆ ಜನಶಕ್ತಿಯ ಸದ್ಬಳಕೆಗೆ ಸಂಬಂಧಿಸಿದಂತೆ ಹಲವು ವಿಷಯಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿದೆವು”.
Yesterday, had an excellent meeting with District Panchayat members from Gujarat. We talked at length about issues relating to rural development and leveraging Jan Shakti for societal progress. pic.twitter.com/HOZafnZRlB
— Narendra Modi (@narendramodi) April 13, 2022