ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ನೇಪಥ್ಯದಲ್ಲಿ ಇಂಡೋನೇಷ್ಯಾದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಗೌರವಾನ್ವಿತ ಪ್ರಬೋವೊ ಸುಬಿಯಾಂಟೊ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ಮೊದಲ ಭೇಟಿಯಾಗಿತ್ತು

 

ಅಧ್ಯಕ್ಷ ಸುಬಿಯಾಂಟೊ ಅಧಿಕಾರ ಸ್ವೀಕರಿಸಿರುವುದಕ್ಕೆ ಪ್ರಧಾನಮಂತ್ರಿ ಅಭಿನಂದನೆ ಸಲ್ಲಿಸಿದರು. ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಚೌಕಟ್ಟಿನಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ತಮ್ಮ ಬದ್ಧತೆಯನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು.ಅವರು ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಸಂಪರ್ಕ, ಪ್ರವಾಸೋದ್ಯಮ, ಆರೋಗ್ಯ ಮತ್ತು ಜನರ ನಡುವಿನ ಸಂಬಂಧಗಳ ವಲಯದಲ್ಲಿನ ಸಹಕಾರದ ಕುರಿತು ಚರ್ಚೆ ನಡೆಸಿದರು. ಭಾರತ ಮತ್ತು ಇಂಡೋನೇಷ್ಯಾ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯಾಗಿ 75 ವರ್ಷಗಳು ಪೂರೈಸಿರುವುದನ್ನು ನೆನಪಿಸಿಕೊಂಡ  ಇಬ್ಬರೂ ನಾಯಕರು ಮತ್ತು ಈ ಸಂದರ್ಭವನ್ನು ಅತ್ಯುತ್ತಮ ರೀತಿಯಲ್ಲಿ ಆಚರಿಸಲು ಕರೆ ನೀಡಿದರು.

ಉಭಯ ನಾಯಕರು ಜಾಗತಿಕ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ವಿಚಾರ ವಿನಿಮಯ ನಡೆಸಿದರು. ಜಿ-20 ರೊಳಗೆ ತಮ್ಮ ನಿಕಟ ಸಹಯೋಗವನ್ನು ಚರ್ಚಿಸಿದ ಅವರು ಜಾಗತಿಕ ದಕ್ಷಿಣದ ಕಾಳಜಿಗಳಿಗೆ ಪ್ರಾಮುಖ್ಯತೆ ನೀಡುವಂತೆ ಕರೆ ನೀಡಿದರು. ಆಸಿಯಾನ್ ಸೇರಿದಂತೆ ಬಹುಪಕ್ಷೀಯ ಮತ್ತು ಹಲವು  ವಲಯಗಳಲ್ಲಿನ ಪರಿಸ್ಪರ ಸಹಕಾರವನ್ನು ಅವರು ಪರಿಶೀಲಿಸಿದರು.

 

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
Cabinet approves minimum support price for Copra for the 2025 season

Media Coverage

Cabinet approves minimum support price for Copra for the 2025 season
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಡಿಸೆಂಬರ್ 2024
December 21, 2024

Inclusive Progress: Bridging Development, Infrastructure, and Opportunity under the leadership of PM Modi