ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಸೆಪ್ಟೆಂಬರ್ 23ರಂದು ಯುಎನ್ ಜಿಎಯಲ್ಲಿ ನಡೆದ ಭವಿಷ್ಯದ ಶೃಂಗಸಭೆಯ ನೇಪಥ್ಯದಲ್ಲಿ ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ರಾಜ್ಯ ಅಧ್ಯಕ್ಷ ಘನತೆವೆತ್ತ ಶ್ರೀ ತೋ ಲಾಮ್ ಅವರನ್ನು ನ್ಯೂಯಾರ್ಕ್ ನಲ್ಲಿ ಭೇಟಿಯಾದರು.
ವರ್ಧಿತ ನಾಯಕತ್ವದ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದಕ್ಕಾಗಿ ಅಧ್ಯಕ್ಷ ತೋ ಲಾಮ್ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು ಮತ್ತು ಭಾರತ ಮತ್ತು ವಿಯೆಟ್ನಾಂ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ನಿರಂತರ ಸಹಯೋಗದ ಭರವಸೆ ವ್ಯಕ್ತಪಡಿಸಿದರು.
ಈ ತಿಂಗಳ ಆರಂಭದಲ್ಲಿ ಯಾಗಿ ಚಂಡಮಾರುತದಿಂದ ಉಂಟಾದ ನಷ್ಟ ಮತ್ತು ಹಾನಿಯ ಹಿನ್ನೆಲೆಯಲ್ಲಿ ವಿಯೆಟ್ನಾಂನೊಂದಿಗೆ ತಮ್ಮ ಸಹಾನುಭೂತಿ ಮತ್ತು ಒಗ್ಗಟ್ಟನ್ನು ಪ್ರಧಾನಿ ಪುನರುಚ್ಚರಿಸಿದರು. ಲಾಮ್ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಲಾಮ್ ಅವರು ಆಪರೇಷನ್ ಸದ್ಭಾವ್ ಅಡಿಯಲ್ಲಿ ಭಾರತವು ತುರ್ತು ಮಾನವೀಯ ನೆರವು ಮತ್ತು ವಿಪತ್ತು ಪರಿಹಾರವನ್ನು ಸಮಯೋಚಿತವಾಗಿ ಪೂರೈಸಿದ್ದಕ್ಕಾಗಿ ಪ್ರಧಾನಮಂತ್ರಿ ಅವರಿಗೆ ಧನ್ಯವಾದ ಅರ್ಪಿಸಿದರು.
ಉಭಯ ದೇಶಗಳ ನಡುವೆ ಅಚಲವಾದ ಪರಸ್ಪರ ನಂಬಿಕೆ, ತಿಳುವಳಿಕೆ ಮತ್ತು ಹಂಚಿಕೆಯ ಹಿತಾಸಕ್ತಿಗಳಿಂದ ಗುರುತಿಸಲ್ಪಟ್ಟ ಆಳವಾದ ನಾಗರಿಕ ಮತ್ತು ಸಾಂಸ್ಕೃತಿಕ ಸಂಪರ್ಕಗಳು ಮತ್ತು ಬೆಳೆಯುತ್ತಿರುವ ಕಾರ್ಯತಂತ್ರದ ಸಂಬಂಧಗಳ ಮಹತ್ವವನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು. ಕಳೆದ ತಿಂಗಳು ವಿಯೆಟ್ನಾಂ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಫಾಮ್ ಮಿನ್ಹ್ ಚಿನ್ಹ್ ಅವರು ಭಾರತಕ್ಕೆ ಭೇಟಿ ನೀಡಿದ್ದನ್ನು ಸ್ಮರಿಸಿದ ಅವರು, ದ್ವಿಪಕ್ಷೀಯ ಸಹಕಾರವನ್ನು ಮುಂದುವರಿಸುವ ಮತ್ತು ಉಭಯ ದೇಶಗಳ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು. ಇಂಡೋ-ಪೆಸಿಫಿಕ್ ಸೇರಿದಂತೆ ಪ್ರಮುಖ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ನಾಯಕರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಜಾಗತಿಕ ದಕ್ಷಿಣದ ಸಾಮೂಹಿಕ ಪಾತ್ರವನ್ನು ಒತ್ತಿಹೇಳಿದರು.
Met Mr. To Lam, the President of Vietnam. We took stock of the full range of India-Vietnam friendship. We look forward to adding momentum in sectors such as connectivity, trade, culture and more. pic.twitter.com/aV5SD2nI4N
— Narendra Modi (@narendramodi) September 23, 2024