ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಮಾತೃಭೂಮಿಯ ಮೇಲಿನ ಅವರ ಭಕ್ತಿ ಮತ್ತು ತ್ಯಾಗವು ದೇಶವಾಸಿಗಳಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ ಎಂದು ಪ್ರಧಾನಿ ಹೇಳಿದರು.
ಈ ಸಂಬಂಧ ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
"ತಮ್ಮ ತಿವ್ರ ರಾಷ್ಟ್ರೀಯತಾವಾದಿ ಚಿಂತನೆಗಳಿಂದ ಭಾರತ ಮಾತೆಯನ್ನು ಹೆಮ್ಮೆಪಡುವಂತೆ ಮಾಡಿದ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ನಮನಗಳು. ತಾಯ್ನಾಡಿಗಾಗಿ ಅವರ ಸಮರ್ಪಣೆ ಮತ್ತು ತ್ಯಾಗ ಸದಾ ದೇಶವಾಸಿಗಳಿಗೆ ಸ್ಫೂರ್ತಿ ನೀಡುತ್ತದೆ, ” ಎಂದಿದ್ದಾರೆ.
अपने प्रखर राष्ट्रवादी विचारों से मां भारती को गौरवान्वित करने वाले डॉ. श्यामा प्रसाद मुखर्जी को उनकी जन्म-जयंती पर आदरपूर्ण श्रद्धांजलि। मातृभूमि के लिए उनका समर्पण और त्याग देशवासियों को सदैव प्रेरित करता रहेगा। pic.twitter.com/QYELTn45fb
— Narendra Modi (@narendramodi) July 6, 2024